ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಕೆ

6blrp3
ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶಾಸಕ ಎಚ್.ಕೆ.ಸುರೇಶ್ ಪ್ರತಿಮೆಗೆ ಪುಷ್ಪಹಾರ ಹಾಕಿ ಗೌರವ ಸಲ್ಲಿಸಿದರು.
Published on

ಬೇಲೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶಾಸಕ ಎಚ್.ಕೆ.ಸುರೇಶ್ ಹಾಗೂ ದಲಿತ ಸಂಘಟನೆ ಮುಖಂಡರು ಮತ್ತು ಸಿಬ್ಬಂದಿ ಅಂಬೇಡ್ಕರ್ ನಗರದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಹಾರ ಹಾಕಿ ಗೌರವ ಸಲ್ಲಿಸಿದರು.

ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಈ ದೇಶದ ಕಟ್ಟ ಕಡೆಯ ಸಾಮಾನ್ಯ ವ್ಯಕ್ತಿಗೂ ನ್ಯಾಯ ಮತ್ತು ಸ್ವಾತಂತ್ರ್ಯವೇನಾದರೂ ಸಿಕ್ಕಿದೆ ಎಂದರೆ ಅದಕ್ಕೆ ಡಾ.ಅಂಬೇಡ್ಕರ್ ಕಾರಣ. ಭೂಮಿ ಇರುವವರೆಗೂ ಅವರ ಹೆಸರು ಅಜರಾಮರವಾಗಿರುತ್ತದೆ. ಅವರು ಇಂದಿನವರಿಗೆ ಮಾರ್ಗದರ್ಶಕರಾಗಿರುವುದಲ್ಲದೆ, ಮುಂದಿನ ಪೀಳಿಗೆಯವರೂ ಹೇಗೆ ಸಮಾಜದಲ್ಲಿ ಬದುಕಬೇಕು ಮತ್ತು ಆಗುಹೋಗುಗಳನ್ನು ತಿಳಿದು ಸರ್ವರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಅಂತಹವರ ಆದರ್ಶಗಳು ಎಲ್ಲರೂ ಅಳವಡಿಸಿಕೊಂಡು ಮುಂದೆ ಸಾಗಬೇಕಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1 ರಮೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಗೆಂಡೇಹಳ್ಳಿ ಶ್ರೀನಿವಾಸ್, ದಲಿತ ಮುಖಂಡರಾದ ಮರಿಯಪ್ಪ, ಮಂಜುನಾಥ್, ಲಕ್ಷ್ಮಣ್, ಲಕ್ಷ್ಮೀನಾರಾಯಣ್, ಆಟೋ ಲಕ್ಷ್ಮಣ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net