ಬಸವೇಶ್ವರರಿಗೆ ಜಿಲ್ಲಾಡಳಿತದಿಂದ ನಮನ

10-05-Shiva-2
ರಾಯಚೂರಿನ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಬಸವ ಜಯಂತಿ ನಿಮಿತ್ತ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್ ಶುಕ್ರವಾರ ಮಾಲಾರ್ಪಣೆ ಮಾಡಿದರು. ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ ಇದ್ದರು.
Published on

ರಾಯಚೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತದಿಂದ ಬಸವೇಶ್ವರ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿಗಳನ್ನು ಶುಕ್ರವಾರ ಸರಳ ರೀತಿಯಲ್ಲಿ ಆಚರಿಸಲಾಯಿತು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಸವೇಶ್ವರ ಪುತ್ಥಳಿ ಹಾಗೂ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಠಾೀಶರಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಿರ್ಜಾಪುರ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net