ಚಂದ್ರಶೇಖರ್ ನಿಧನಕ್ಕೆ ಶ್ರದ್ಧಾಂಜಲಿ

6skpp4 chandrashekar shrddanjali
ಸಕಲೇಶಪುರ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಹಿರಿಯ ಪತ್ರಕರ್ತ ಚಂದ್ರಶೇಖರ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜೈಭೀಮ್ ಮಂಜು, ಸುಧೀರ್ ಲಕ್ಷ್ಮೀನಾರಾಯಣ್, ದಯಾನಂದ್ ಇತರರು ಇದ್ದರು.
Published on

ಸಕಲೇಶಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್ (75) ರವರು ಅನಾರೋಗ್ಯದಿಂದ ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶ್ರದ್ಧಾಂಜಲಿ ಸಭೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೈಭೀಮ್ ಮಂಜು ಮಾತನಾಡಿ, ಚಂದ್ರಶೇಖರ್ ಹಲವು ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಪತ್ರಕರ್ತರು ಮಾತ್ರವಲ್ಲ, ಒಬ್ಬ ಉತ್ತಮ ಚಿತ್ರ ಕಲಾವಿದರೂ ಆಗಿದ್ದರು. ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದ ಅವರ ಸಾವಿನಿಂದ ಸಂಘಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಕುಟುಂಬಕ್ಕೆ ಅವರ ಸಾವಿನ ನೋವನ್ನು ಮರೆಯುವ ಶಕ್ತಿಯನ್ನು ಆ ಭಗವಂತ ಅವರಿಗೆ ಕೊಡಲಿ ಎಂದರು.

ಸಂಘದ ಉಪಾಧ್ಯಕ್ಷ ಸುಧೀರ್ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ದಯಾನಂದ್, ಸಹ ಕಾರ್ಯದರ್ಶಿ ನವೀನ್ ಸದಾ, ಖಜಾಂಚಿ ಯೋಗೇಶ್, ಹಿರಿಯ ಪತ್ರಕರ್ತರಾದ ಪ್ರಸನ್ನಕುಮಾರ್, ಅಕ್ಬರ್ ಜುನೈದ್, ಸೋಮಶೇಖರ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net