ಬಾಲ ವಿಜ್ಞಾನಿ ಶ್ರೀಶಾಳಿಗೆ ಸನ್ಮಾನ

Tribute to Child Scientist Srisali
Published on

ಮಡಿಕೇರಿ:

ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕøತ ವಿದ್ಯಾರ್ಥಿನಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜ್ ಅವರು ಮಂಗಳವಾರ ಸನ್ಮಾನಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ರಲ್ಲಿ "ಕಲುಷಿತಗೊಳ್ಳುತ್ತಿರುವ ನದಿ ತೀರಗಳು" ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾಳಿಗೆ ಶುಭ ಹಾರೈಸಿದ ಸಚಿವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ ಕುರಿತು ಮಾಹಿತಿ ನೀಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಮಕ್ಕಳ ವಿಜ್ಞಾನ ಸಮಾವೇಶವು ವಿದ್ಯಾರ್ಥಿಗಳನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸುತ್ತಿದೆ.ಜಿಲ್ಲೆಯ ವಿದ್ಯಾರ್ಥಿಗಳು ಹಲವು ಬಾರಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ಶಾಸಕರಾದ ಎ.ಎಸ್.ಪೆÇನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಡಿಸಿ ವೆಂಕಟ್‍ರಾಜಾ, ಎಸ್.ಪಿ.ರಾಮರಾಜನ್, ಡಿಡಿಪಿಐ ಎಂ.ಚಂದ್ರಕಾಂತ್, ಬಾಲ ವಿಜ್ಞಾನಿಯ ಮಾರ್ಗದರ್ಶಿ ಶಿಕ್ಷಕಿ ಶೋಭಾ, ವಿದ್ಯಾರ್ಥಿನಿಯ ಪೆÇೀಷಕರಾದ ಸಂಧ್ಯಾ ಮತ್ತು ಶ್ರೀಜಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net