

ಆರ್ಡಿ: ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಮೀಪದ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆರ್ಡಿ, ಬೆಳ್ವೆ ವಲಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 1869ನೇ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿದ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಎ.ಜಿ. ಅವರನ್ನು ಇತ್ತೀಚೆಗೆ ಗೌರವಿಸಲಾಯಿತು.
ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಆರ್ಡಿ ಅಧ್ಯಕ್ಷ ಸುರೇಶ ಶೆಟ್ಟಿ ಆರ್ಡಿ, ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ಬೆಳ್ವೆ ವಲಯ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಅಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ, ಉಡುಪಿ ಪ್ರಾದೇಶಿಕ ಕಚೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಜನಜಾಗೃತಿ ವೇದಿಕೆ ಸದಸ್ಯ ಸುದರ್ಶನ ಶೆಟ್ಟಿ ಆರ್ಡಿ, ಪತ್ರಕರ್ತ ಕೆ.ಸಂಜೀವ ಆರ್ಡಿ, ಶಿಬಿರಾಧಿಕಾರಿ ವಿದ್ಯಾಧರ, ಆರೋಗ್ಯ ಇಲಾಖೆ ಜಯಲಕ್ಷ್ಮೀ, ಆರ್ಡಿ ಉಪ ಕೇಂದ್ರದ ಸಿಎಚ್‌ಒ ಶ್ಯಾಮಲಾ, ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.