

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಕೆ.ಸಂಜೀವ ಪೂಜಾರಿ ಅಭಿನಂದನಾ ಸಮಿತಿ, ಬಿ.ಸಿ.ರೋಡಿನ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ, ಮೆಲ್ಕಾರಿನ ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಶಿವಗಿರಿ ಮಹಿಳಾ ಸಹಕಾರಿ ಸಂಘ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಭಾನುವಾರ ಸಜೀಪಮೂಡ ಸುಭಾಷ್‌ನಗರ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಭಿಮಾನದ ಸಾಧಕನಿಗೆ ಹುಟ್ಟೂರ ಗೌರವ ನೀಡಿ ಸನ್ಮಾನಿಸಲಾಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಮಾತನಾಡಿ, ನಾರಾಯಣ ಗುರುಗಳ ಆದರ್ಶದೊಂದಿಗೆ ಸಂಜೀವ ಪೂಜಾರಿ ಸಹಕಾರಿ ಚಳವಳಿಯಲ್ಲಿ ಸಾಧನೆ ತೋರಿದ್ದು, ಸಾಮಾಜಿಕ ಬದುಕಿನ ಜತೆಗೆ ಕಾಂಗ್ರೆಸ್‌ನಲ್ಲಿ ಸಕ್ರೀಯವಾಗಿದ್ದು, ಜನಪ್ರತಿನಿಧಿಯಾಗಿ ಸಮುದಾಯ ಏಳಿಗೆ ಕುರಿತು ಚಿಂತನೆ ನಡೆಸಿದ್ದರು. ಸರ್ಕಾರ ನಾರಾಯಣ ಗುರು ಜಯಂತಿ ಆಚರಿಸುವ ಘೋಷಣೆ ಸಿಎಂ ಸಿದ್ದರಾಮಯ್ಯ ಸಜೀಪಮೂಡದ ಗುರುಮಂದಿರದಲ್ಲಿ ಮಾಡಿದ್ದು, ಇದರಲ್ಲಿ ಸಂಜೀವಣ್ಣನ ಪ್ರಯತ್ನವಿರುವುದು ಸ್ಮರಣೀಯ ಎಂದರು.
ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ಕೆ.ಸಂಜೀವ ಪೂಜಾರಿ ಸುಭಾಷ್‌ನಗರ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಅಭಿನಂದನಾ ಭಾಷಣ ಮಾಡಿದರು.
ಜಿಪಂ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ಉಷಾ ಅಂಚನ್ ಶುಭಹಾರೈಸಿದರು. ಶಿವಗಿರಿ ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಸಜೀಪಮೂಡ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅನ್ನಪ್ಪಾಡಿ, ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ಉಪಾಧ್ಯಕ್ಷ ರಾಜೇಶ್ ಸುವರ್ಣ, ಸಜೀಪಮೂಡ ಗ್ರಾಪಂ ಅಧ್ಯಕ್ಷೆ ಶೋಭಾ ಶೆಟ್ಟಿ, ಸಮಿತಿ ಸಂಚಾಲಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಮಹೇಶ್ ಪೂಜಾರಿ ಪಟ್ಟುಗುಡ್ಡೆ, ಯಶವಂತ ಪೂಜಾರಿ ದೇರಾಜೆಗುತ್ತು, ತಾರಾನಾಥ ಪೂಜಾರಿ ಮರ್ತಾಜೆ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಸಮಿತಿ ಸಂಚಾಲಕ ಗಿರೀಶ್‌ಕುಮಾರ್ ಪೆರ್ವ ಸ್ವಾಗತಿಸಿ, ವಂದಿಸಿದರು. ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು ಲೈವ್ ಮ್ಯೂಸಿಕ್ ಶೋರ್ ದಾ ಬ್ಯಾಂಡ್ ಅವರಿಂದ ಸಂಗೀತ ರಸಮಂಜರಿ ನಡೆಯಿತು.
ಸಾಧನೆ, ಜ್ಞಾನ ಸಂಪಾದನೆಗೆ ಜಾತಿ, ವಯಸ್ಸಿನ ಮಿತಿ ಇಲ್ಲ. ಪರಿಶ್ರಮ ಹಾಗೂ ಇಚ್ಛಾಶಕ್ತಿ ಇದ್ದವರಿಗೆ ಮಾತ್ರ ಅದನ್ನು ಸಾಧಿಸಲು ಸಾಧ್ಯವಾಗುತ್ತದೆ. ಅದನ್ನು ಸಂಜೀವ ಪೂಜಾರಿ ಸಾಧನೆ ಮೂಲಕ ತೋರಿಸಿಕೊಟ್ಟಿದ್ದಾರೆ. ಹರಿಕೃಷ್ಣ ಬಂಟ್ವಾಳ್, ಅಧ್ಯಕ್ಷ ಶ್ರೀಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನನಗೆ ಸಿಕ್ಕ ಪ್ರತಿ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಯಾವತ್ತೂ ಕೂಡ ಪ್ರಶಸ್ತಿಯ ಹಿಂದೆ ಹೋಗಿಲ್ಲ. ನನ್ನ ಆತ್ಮೀಯರು ಸೇರಿಕೊಂಡು ಶ್ರಮಿಸಿ ಪ್ರಶಸ್ತಿ ತಂದುಕೊಟ್ಟಿದ್ದಾರೆ. ಪ್ರಶಸ್ತಿ ಸಿಕ್ಕಿದ ಬಳಿಕ ಅದರ ಮೌಲ್ಯದ ಅರಿವಾಗಿದ್ದು, ಜನರ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾನು ದುಡಿದ ಸಂಸ್ಥೆಗಳಿಂದ ಸಿಕ್ಕ ಈ ಗೌರವ ಪ್ರಶಸ್ತಿಗಿಂತಲೂ ಸಂತೋಷ ತಂದಿದೆ. ಕೆ.ಸಂಜೀವ ಪೂಜಾರಿ https://www.vijayavani.net/govt-fund-for-kambala https://www.vijayavani.net/press-club-guest-honour