

ರಿಪ್ಪನ್‌ಪೇಟೆ: ರಾಷ್ಟ್ರೀಯ ಪ್ರೋ ಕಬಡ್ಡಿ ಪಂದ್ಯಾವಳಿಯಲ್ಲಿ ಯುಪಿ ಯೋಧ ತಂಡದಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದ ಗಗನ್ ಗೌಡ ಅವರನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸನ್ಮಾನಿಸಿದರು. ಸಮೀಪದ ಹಾಲುಗುಡ್ಡೆ ಗ್ರಾಮದ ಗ್ರಾಪಂ ಸದಸ್ಯ ರಾಜುಗೌಡ ಅವರ ಪುತ್ರ ಗಗನ್ ಗೌಡ ಅವರ ಕ್ರೀಡಾ ಚಟುವಟಿಕೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಗಗನ್ ಗೌಡ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಲಿ ಎಂದು ಆಶಿಸಿದರು. ಮಾಜಿ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ತಾಪಂ ಮಾಜಿ ಅಧ್ಯಕ್ಷ ವೀರೇಶ ಆಲವಳ್ಳಿ, ಮುಖಂಡರಾದ ಎಂ.ಬಿ.ಮಂಜುನಾಥ, ಸುರೇಶಸಿಂಗ್, ಶೇಖರಪ್ಪ ಗೌಡ, ಘಂಟೆ ರಾಜೇಂದ್ರ, ರಾಜೇಶ್ ಜೈನ್, ಎಚ್.ಎಸ್.ರವಿ ಇತರರಿದ್ದರು.