

ಉಪ್ಪಳ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ‘ಸಾಹಿತ್ಯ ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಹಿರಿಯ ಸಾಹಿತಿ ಬಿ.ಸತ್ಯವತಿ ಭಟ್ ಕೊಳಚಪ್ಪು ಅವರನ್ನು ಕೊಳಚಪ್ಪು ನಿವಾಸದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಪ್ರೊ.ಪಿ.ಎನ್.ಮೂಡಿತ್ತಾಯ ಅಭಿನಂದನಾ ಭಾಷಣ ಮಾಡಿದರು.
ಮೀಂಜ ಕೊಳಚಪ್ಪು ಶ್ರೀಶಾಸ್ತಾವೇಶ್ವರ ದೇವಾಲಯ ಆಡಳಿತ ಸಮಿತಿ ಅಧ್ಯಕ್ಷ ರುನಾಥ ಶೆಟ್ಟಿ ಕೆ., ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಸಾಹಿತಿ ಲತೀಶ್ ಸಂಕೋಳಿಗೆ, ಬಿ.ಮಹಾಬಲ ತಿಲಕ, ಸುಬ್ರಹ್ಮಣ್ಯ ಭಟ್ ಕೊಳಚಪ್ಪು, ಮಹಾವೀರ ಶಿವಮೊಗ್ಗ, ಸವಿತಾ ಶಿವಮೊಗ್ಗ ಮೊದಲಾದವರಿದ್ದರು. ಸತ್ಯವತಿ ಭಟ್ ಸನ್ಮಾನಕ್ಕೆ ಕತಜ್ಞತೆ ಸಲ್ಲಿಸಿದರು.
ಕಸಾಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಶಿಕ್ಷಕಿ ಸಾವಿತ್ರಿ ವಂದಿಸಿದರು.