ವೈದ್ಯಾಧಿಕಾರಿ ಡಾ.ಮಂಜುನಾಥ್‌ಗೆ ಗೌರವಾರ್ಪಣೆ

New Project (10)
Published on

ಸುಬ್ರಹ್ಮಣ್ಯ: ಪಂಜ ಆರೋಗ್ಯ ಕೇಂದ್ರದಲ್ಲಿ 13 ವರ್ಷಗಳಿಂದ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವೈದ್ಯಾಧಿಕಾರಿ ಡಾ.ಮಂಜುನಾಥ್ ಅವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕುಮಾರ್ ಕೆ.ಎಸ್.ಕರಿಕ್ಕಳ ಶುಭಹಾರೈಸಿದರು. ಸಾರ್ವಜನಿಕ ಆರಾಧನಾ ಸಮಿತಿ ಅಧ್ಯಕ್ಷ ಸವಿತಾರ ಮುಡೂರು ಅಭಿನಂದನಾ ಭಾಷಣ ಮಾಡಿದರು. ಪಂಜ ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಜಳಕದಹೊಳೆ, ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರ ಆನಂದ ಗೌಡ ಕಂಬಳ, ಪೈಂದೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ನಿಡ್ವಾಳ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ, ಗರಡಿ ಬೈಲು ಕಾಚುಕುಜುಂಬ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಅಳ್ಪೆಚಿಂಗಾಣಿಗುಡ್ಡೆ ದೈವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕುಸುಮಾಧರ ಕರಿಮಜಲು, ವನಿತಾ ಸಮಾಜ ಅಧ್ಯಕ್ಷೆ ಸುಮಾ ಕುದ್ವ, ಪಂಜ ಅರಣ್ಯ ಸಮಿತಿ ಅಧ್ಯಕ್ಷ ಲಕ್ಷ್ಮಣಗೌಡ ಬೊಳ್ಳಾಜೆ, ಪಂಜ ಶಾರದಾಂಬಾ ಯಕ್ಷಗಾನ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು, ಜೆಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ನಿಕಟಪೂರ್ವಾಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಪಂಜ ರಿಕ್ಷಾ ಚಾಲಕರ ಸಂಘ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ ಸಂಪ್ಯಾಡಿ, ಗ್ರಾಮ ಸ್ವರಾಜ್ ಸಂಚಾಲಕ ಜಿನ್ನಪ್ಪ ಅಳ್ಪೆ, ಪಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ತೋಟ, ಮಹಾತ್ಮಗಾಂಧಿ ವಿದ್ಯಾಪೀಠ ಸಂಚಾಲಕ ಪುರುಷೋತ್ತಮ ಮುಡೂರು, ಕೇನ್ಯ ಸ್ನೇಹಿತರ ಕೂಟ ಅಧ್ಯಕ್ಷೆ ಶ್ಯಾಮಲಾ ರೈ ನೇರ್ಪು, ಪಂಬೆತ್ತಾಡಿ ಅಮೃತ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಬಾಬ್ಲುಬೆಟ್ಟು, ಪಂಬೆತ್ತಾಡಿ ಅಕ್ಷತಾ ಯುವತಿ ಮಂಡಲ ಅಧ್ಯಕ್ಷೆ ಧನಲಕ್ಷ್ಮೀ ಮಠ ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net