

ಗೋಣಿಕೊಪ್ಪ: ಗೋಣಿಕೊಪ್ಪದ ಫಿಟ್ನೆಸ್ ಮಂತ್ರ ಜಿಮ್ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭಾನುವಾರ ಸನ್ಮಾನಿಸಲಾಯಿತು.
ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ, ಇತ್ತೀಚೆಗೆ ಗೋಣಿಕೊಪ್ಪಲಿನಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ 110ಕ್ಕೂ ಹೆಚ್ಚಿನ ದೇಹದಾರ್ಢ್ಯ ಸ್ಪರ್ಧಿಗಳು ಪಾಲ್ಗೊಂಡಿದ್ದು ಶ್ಲಾಘನೀಯ. ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಈ ನಿಟ್ಟಿನಲ್ಲಿ ಮುಂದಿನ ವರ್ಷವೂ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲು ಸಂಪೂರ್ಣ ಸಹಕಾರ ಇದೆ ಎಂದು ಭರವಸೆ ನೀಡಿದರು.
ಪೊನ್ನಂಪೇಟೆ ಕೊಡವ ಸಮಾಜದ ಪೋಮ್ಮಕಡ ಕೂಟದ ಅಧ್ಯಕ್ಷೆ ಕೊಣಿಯಂಡ ಕಾವ್ಯಾ ಸಂಜು ಮಾತನಾಡಿದರು. ಫಿಟ್ನೆಸ್ ಮಂತ್ರ ಜಿಮ್ ಕೇಂದ್ರದ ವ್ಯವಸ್ಥಾಪಕರಾದ ರಫೀಕ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಮುಖರಾದ ಆರ್. ಉಮೇಶ್, ಮಹೇಶ್, ಮುಕ್ತಾರ್, ಧನುಷ್ ತಮ್ಮಯ್ಯ, ಧ್ಯಾನ್ ಪೆಮ್ಮಯ್ಯ ಇತರರು ಇದ್ದರು.