30ಕ್ಕೂ ಹೆಚ್ಚು ಸಾಧಕರಿಗೆ ಗೌರವ

30ಕ್ಕೂ ಹೆಚ್ಚು ಸಾಧಕರಿಗೆ ಗೌರವ
Published on

ನಂಜನಗೂಡು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿವರ್ಷ ನೀಡುತ್ತಿರುವ ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ನಂಜನಗೂಡಿನ ಎಪಿಎಂಸಿ ಆವರಣದಲ್ಲಿ ಗುರುವಾರ ನಡೆಯಿತು.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪೌರಕಾರ್ಮಿಕ ಚಿನ್ನಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸಲಾಯಿತು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಕಾಯಕ ಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಸಂಘಟನೆಯ ಮೂಲಕ ಹಳ್ಳಿಗಳಲ್ಲಿ ವ್ಯವಸಾಯ ಮಾಡುವ ರೈತ ಮಹಿಳೆಯರು, ಆಶಾ ಮತ್ತು ಅಂಗನವಾಡಿ ಕಾರ್ಯಕ
ರ್ತೆಯರು, ಪೌರ ಕಾರ್ಮಿಕರು, ಶಿಕ್ಷಕರು, ಮತ್ತು ಪತ್ರಕರ್ತರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.

ಪತ್ರಕರ್ತ ಗಂಗಾಧರ್, ಮಹದೇವಪ್ರಸಾದ್, ಸಿ.ಎಂ.ಸುಗಂಧರಾಜು, ವೆಂಕಟೇಶ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯ್ ಕುಮಾರ್, ಸಾಹಿತಿ ನಾರಾಯಣಸ್ವಾಮಿ, ರೈತ ಸಂಘದ ಮುಖಂಡ ಬಂಗಾರಸ್ವಾಮಿ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜುಕಿರಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲೂಕು ಪ್ರಧಾನ ಕಾರ್ಯದರ್ಶಿ ಉಪ್ಪಿನ ಹಳ್ಳಿ ದೇವರಾಜು, ಜಿಲ್ಲಾ ಸಂಚಾಲಕ ಕಳ್ಳಿಪುರ ಮಹದೇವಸ್ವಾಮಿ, ಜಯಪ್ರಕಾಶ್, ಅಹಲ್ಯಾ ನಾಗರಾಜು, ದೊಡ್ಡಯ್ಯ, ಶೈಲಜಾ, ಶ್ವೇತಾ, ಮೋಹನ್, ಅರಿಯೂರು ಮಹೇಶ್, ಕಳಲೆ ಕಾರ್ತಿಕ್, ಹೆಗ್ಗಡಹಳ್ಳಿ ಮಹದೇವಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net