ಮುಡಿಗುಂಡ ಆದರ್ಶ ವಿದ್ಯಾಲಯಕ್ಕೆ ಗೌರವ

ಬೆಂಗಳೂರಿನ ಆಡುಗೋಡಿಯಲ್ಲಿ ಗುರುವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಮುಡಿಗುಂಡದ ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕಿ ಪ್ರಿಯದರ್ಶಿನಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸನ್ಮಾನಿಸಿದರು. ಮಧು ಬಂಗಾರಪ್ಪ, ರಾಮ ಲಿಂಗಾರೆಡ್ಡಿ ಇತರರಿದ್ದಾರೆ.

Published on

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿದ ಜಿಲ್ಲೆಯ ಏಕೈಕ ಸರ್ಕಾರಿ ಮುಡಿಗುಂಡದ ಆದರ್ಶ ವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದೆ.

ಬೆಂಗಳೂರಿನ ಆಡುಗೋಡಿಯಲ್ಲಿ ಗುರುವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ 2025-26 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮುಡಿ ಗುಂಡ ಆದರ್ಶ ಶಾಲೆಯ ಮುಖ್ಯಶಿಕ್ಷಕಿ ಆರ್.ಪ್ರಿಯದರ್ಶಿನಿ ಅವರನ್ನು ಸನ್ಮಾನಿಸಿದರು.

ಮುಡಿಗುಂಡದ ಸರ್ಕಾರಿ ಆದರ್ಶ ವಿದ್ಯಾಲಯ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದಿದ್ದು, ಜಿಲ್ಲೆಯಲ್ಲಿ ಶೇ.100 ಫಲಿತಾಂಶ ಪಡೆದ ಏಕೈಕ ಸರ್ಕಾರಿ ಶಾಲೆಯಾಗಿದೆ. ಶೇ.100ರಷ್ಟು ಫಲಿತಾಂಶ ಪಡೆದ ಸರ್ಕಾರಿ ಪ್ರೌಢಶಾಲೆಗಳ ಪೈಕಿ ವಿಭಾಗವಾರು ಗರಿಷ್ಠ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಮಕ್ಕಳ ಸಂಖ್ಯೆಯನ್ನು ಆಧರಿಸಿ ರಾಜ್ಯದ ಒಟ್ಟು 10 ಸರ್ಕಾರಿ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು ಅದರಲ್ಲಿ ಕೊಳ್ಳೇಗಾಲದ ಆದರ್ಶ ವಿದ್ಯಾಲಯವು ಆಯ್ಕೆಗೊಂಡು ತಾಲೂಕಿಗೆ ಕೀರ್ತಿ ತಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net