ಬಿಆರ್‌ಸಿ ಕೇಂದ್ರದಲ್ಲಿ ನಯನಾ, ಐಶ್ವರ್ಯಗೆ ಸನ್ಮಾನ

ಬಿಆರ್‌ಸಿ ಕೇಂದ್ರದಲ್ಲಿ ನಯನಾ, ಐಶ್ವರ್ಯಗೆ ಸನ್ಮಾನ
Published on

ಯಳಂದೂರು: ಬೆಂಗಳೂರಿನಲ್ಲಿ ನಡೆದ ಅಂಗವಿಕಲ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದ ನಯನಾ ಹಾಗೂ ಐಶ್ವರ್ಯಗೆ ಇತ್ತೀಚೆಗೆ ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು.

ಯರಿಯೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಐಶ್ವರ್ಯ ಗುಂಡು ಎಸೆತ ಸ್ಪರ್ಧೆಯಲ್ಲಿ ಹಾಗೂ ಬಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ನಯನಾ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಿಆರ್‌ಸಿ ನಂಜುಂಡಯ್ಯ ಅಭಿನಂದನೆ ಸಲ್ಲಿಸಿ ಮಾತನಾಡಿ, ರಾಜ್ಯ ಮಟ್ಟದ ಅಂಗವಿಕಲ ಮಕ್ಕಳ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ 20 ಮಕ್ಕಳು ಭಾಗವಹಿಸಿದ್ದು, ಕೊಳ್ಳೇಗಾಲ ತಾಲೂಕಿನ ಇಬ್ಬರು ಯಳಂದೂರು ತಾಲೂಕಿನ ಇಬ್ಬರು ಹಾಗೂ ಗುಂಡ್ಲುಪೇಟೆಯ ಒಬ್ಬ ವಿದ್ಯಾರ್ಥಿ ಪ್ರಶಸ್ತಿಗೆ ಭಾಜರಾಗಿದ್ದಾರೆ.

ಅಂಗವಿಕಲ ಮಕ್ಕಳಲ್ಲಿ ಅಗಾಧ ಪ್ರತಿಭೆ ಇದ್ದು, ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸರ್ಕಾರದಿಂದ ಸಾಕಷ್ಟು ಸವಲತ್ತುಗಳಿದ್ದು, ಅವುಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಬಿಇಐಆರ್‌ಟಿ ಶಿಕ್ಷಕ ಮಧು, ನಂಜುಂಡಸ್ವಾಮಿ, ಸತೀಶ್, ರಂಗಸ್ವಾಮಿ, ರೇಚಣ್ಣ, ಬಿಳಿಗಿರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net