ನೇಹಾ ಹಿರೇಮಠಗೆ ಶ್ರದ್ಧಾಂಜಲಿ

20 Dwd 5
Published on

ಧಾರವಾಡ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಮಸ್ತ ಧಾರವಾಡ ನಾಗರಿಕ ವೇದಿಕೆಯಿಂದ ನಗರದ ಜ್ಯುಬಿಲಿ ವೃತ್ತದಲ್ಲಿ ಶನಿವಾರ ಸಂಜೆ ಮೇಣದಬತ್ತಿ ಹಿಡಿದು ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವೃತ್ತದಲ್ಲಿ ಜಮಾಯಿಸಿದ ನೂರಾರು ನಾಗರಿಕರು ಶ್ರದ್ಧಾಂಜಲಿ ಸಲ್ಲಿಸಿ ನೇಹಾ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಿಂದಾಗಿ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net