

ಕಾರ್ಕಳ: ಇತ್ತೀಚೆಗೆ ಅಗಲಿದ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಿತು.
ವಾಗ್ಮಿ ರಾಜೇಂದ್ರ ಭಟ್ ಕೆ. ಅವರು ರತನ್ ಟಾಟಾರ ಜೀವನಗಾಥೆ ವಿವರಿಸಿದರು. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರ್, ಉಪ ಪ್ರಾಂಶುಪಾಲ ಶ್ರೀಸಾಹಿತ್ಯ, ಉಷಾ ರಾವ್ ಯು., ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ. ಉಪಸ್ಥಿತರಿದ್ದರು.