ನಿವೃತ್ತ ಶಿಕ್ಷಕ ವಿಶ್ವನಾಥ ಭಟ್‌ಗೆ ಸನ್ಮಾನ

gan (23)
Published on

ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ, ವೈಷ್ಣವಿ ಇವೆಂಟ್ಸ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ವತಿಯಿಂದ, ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯ ಶಿಕ್ಷಕರಾಗಿ 36 ವರ್ಷ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ವಿದ್ಯಾಲಯ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.

ವೈಷ್ಣವಿ ಇವೆಂಟ್ಸ್ ವಾಲೀಕ ಗೋಪಾಲ ಚಂದನ್, ಬಿಲ್ಲವ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್.ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ದೀಕ್ಷಿತ್ ಮೇಸ್ತ ಮತ್ತು ಬಿಲ್ಲವ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಜಿ.ಎ.ಆರ್.ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net