

ಬಂಟ್ವಾಳ: ಬಂಟರ ಸಂಘದ ವಿಂಶತಿ ಸಂಭ್ರಮ ಪ್ರಯುಕ್ತ ಭಾನುವಾರ ಶ್ರೀದೇವಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಸದಾನಂದ ಶೆಟ್ಟಿ, ಎಂಆರ್ಜಿ ಗ್ರೂಪ್ ಅಧ್ಯಕ್ಷ ಡಾ.ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಗೆ ವಿಂಶತಿ ಗೌರವ ನೀಡಿ ಅಭಿನಂದಿಸಲಾಯಿತು.
ಆಳ್ವಾಸ್ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಮೋಹನ ಆಳ್ವ, ಶಶಿ ಕ್ಯಾಟರಿಂಗ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ, ಸಹ್ಯಾದ್ರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಚಾನೆಲ್ ಪ್ರೈಟ್ ಸರ್ವೀಸಸ್ನ ಕಿಶನ್ ಶೆಟ್ಟಿ, ದುಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸನ್ಮಾನಿಸಿದರು. ನವನೀತ ಶೆಟ್ಟಿ ಕದ್ರಿ, ಮೋಹನ್ ರೈ ಕರ್ನೂರು, ಅಶೋಕ್ ಪಕ್ಕಳ ಮುಂಬೈ, ನವೀನ್ ಶೆಟ್ಟಿ ಎಡ್ಮೆಮಾರ್, ಪುರುಷೋತ್ತಮ ಭಂಡಾರಿ, ಅಡ್ಯಾರು ಅಭಿನಂದನಾ ನುಡಿಗಳನ್ನಾಡಿದರು.
ಯಕ್ಷ ಧ್ರುವ ಪಟ್ಲ ಫೌಂಡೇಷನ್ನ ಸತಿಶ್ ಶೆಟ್ಟಿ ಪಟ್ಲ, ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಉಪಾಧ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ ಅರಳ, ಜತೆ ಕೋಶಾಧಿಕಾರಿ ಪ್ರತಿಭಾ ಎ.ರೈ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್.ಭಂಡಾರಿ, ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಉಪಸ್ಥಿತರಿದ್ದರು. ವಿಂಶತಿ ಸಂಭ್ರಮ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ನಿರೂಪಿಸಿದರು.