ನಾಡು ಕಂಡ ಧೀಮಂತ ನಾಯಕ: ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಬಣ್ಣನೆ

Tribute to SM Krishna in the city council Mandya
Published on

ಮಂಡ್ಯ: ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿ, ಬೆಂಗಳೂರಿನಲ್ಲಿ ಐಟಿ-ಬಿಟಿ ತರುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ಎಸ್.ಎಂ.ಕೃಷ್ಣ ಅವರ ನಿಧನ ಅಪಾರವಾದ ನಷ್ಟವನ್ನುಂಟು ಮಾಡಿದೆ ಎಂದು ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ವಿಷಾದ ವ್ಯಕ್ತಪಡಿಸಿದರು.

ನಗರಸಭಾ ಕಚೇರಿಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಎಲ್ಲರಿಗೂ ಮಾದರಿಯಾಗಿದ್ದರು ಎಂದರು. ಪೌರಾಯುಕ್ತೆ ಪಂಪಶ್ರೀ ಮಾತನಾಡಿ, ಕೃಷ್ಣ ಅವರು ಸರಳ ಸಜ್ಜನಿಕೆಯ ಮೂಲಕ ಇಡೀ ರಾಷ್ಟ್ರವೇ ಮೆಚ್ಚುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸದಾ ಅವರ ನೆನಪು ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ. ಅವರ ಅಗಲಿಕೆ ತುಂಬಾ ನೋವನ್ನುಂಟು ಮಾಡಿದೆ ಎಂದರು.

ನಗರಸಭೆ ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್, ಸದಸ್ಯರಾದ ನಾಗೇಶ್, ರಜಿನಿ, ವಸೀಂ, ಟಿ.ಕೆ.ರಾಮಲಿಂಗಯ್ಯ, ಬಿಜೆಪಿ ನಗರಾಧ್ಯಕ್ಷ ವಸಂತ್‌ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಅಧಿಕಾರಿಗಳಾದ ರವಿಕುಮಾರ್, ನಾಗರಾಜು, ರುದ್ರೇಗೌಡ, ಮಂಜುನಾಥ್, ರಾಜೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net