ತಗರೆ ಕುಮಾರ ಶಾಲೆಯ ವಿದ್ಯಾರ್ಥಿ ಪ್ರಜ್ವಲ್‌ಗೆ ಸನ್ಮಾನ

10blrp7
Published on

ಹಾಸನ: ರಾಜ್ಯ ಮಟ್ಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ತಗರೆ ಕುಮಾರ ಪ್ರೌಢಶಾಲೆ ವಿದ್ಯಾರ್ಥಿ ಎಂ.ಎಸ್.ಪ್ರಜ್ವಲ್‌ನನ್ನು ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಶನಿವಾರ ತಗರೆ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.

ಬೇಲೂರಿನಲ್ಲಿ ಎಚ್.ಕೆ.ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದ ಜತೆ ತಮಗೆ ಆಸಕ್ತಿ ಇರುವ ಕ್ರೀಡೆ ಅಥವಾ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು. ತಗರೆ ಕುಮಾರ ಪ್ರೌಢಶಾಲೆ ವಿದ್ಯಾರ್ಥಿ ಎಂ.ಎಸ್.ಪ್ರಜ್ವಲ್, ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದರು.


ಪುರಸಭೆ ಮಾಜಿ ಅಧ್ಯಕ್ಷ ಎಚ್.ಎಂ.ದಯಾನಂದ್ ಮಾತನಾಡಿ, ಇಲ್ಲಿನ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನಡುವೆಯೂ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಹಕಾರ ಮತ್ತು ಪ್ರೋತ್ಸಾಹದಿಂದ ಗ್ರಾಮೀಣ ಪ್ರತಿಭೆ ಎಂ.ಎಸ್.ಪ್ರಜ್ವಲ್, ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ಸಂತೋಷ ತಂದಿದೆ ಎಂದರು.


ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನಾಗೇಶ್, ಕುಶಾವರ ಗ್ರಾಪಂ ಅಧ್ಯಕ್ಷೆ ಗುಣ, ಕಾಫಿ ಬೆಳೆಗಾರ ಸಂಘದ ಅಧ್ಯಕ್ಷ ಅದ್ದೂರಿ ಚೇತನ್, ಮುಖ್ಯ ಶಿಕ್ಷಕ ಗಣೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net