ಬಳಂಜ ಶಾಲೆಯಲ್ಲಿ ಶಿಕ್ಷಕರಿಗೆ ಗೌರವಾರ್ಪಣೆ

Bel_Balanja
Published on

ಬೆಳ್ತಂಗಡಿ: ಬಳಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವರ್ಗಾವಣೆ ಮತ್ತು ನಿವೃತ್ತಿಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು.

17 ವರ್ಷ ಸೇವೆ ಸಲ್ಲಿಸಿದ ಶಿಕ್ಷಕಿ ನೇಮಮ್ಮ ವರ್ಗಾವಣೆಗೊಂಡಿದ್ದು, 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ರೆನಿಲ್ಡಾ ಜೋಯ್ಸ ಮಥಾಯಸ್ ಸೇವಾ ನಿವೃತ್ತಿ ಹೊಂದಿದ್ದಾರೆ.

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಬಳಂಜ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ರತ್ನರಾಜ್, ಟ್ರಸ್ಟಿಗಳಾದ ಬಿ.ಪ್ರಮೋದ್ ಕುಮಾರ್ ಮತ್ತು ವಿನು ಬಳಂಜ, ಶಾಲಾ ಮುಖ್ಯಶಿಕ್ಷಕ, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.

ಶಿಕ್ಷಕ ಮಲ್ಲಿಕಾರ್ಜುನ ಆರ್.ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕ ರಂಗಸ್ವಾಮಿ ಸಿ.ಆರ್. ಸ್ವಾಗತಿಸಿದರು. ಶಿಕ್ಷಕಿ ಕೀರ್ತಿ ವಂದಿಸಿದರು. ಶಿಕ್ಷಕರು ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net