

ಕೆ.ಆರ್.ಸಾಗರ: ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಳಗೊಳ ಹೋಬಳಿ ಘಟಕದಿಂದ ಶಿಕ್ಷಕರ ದಿನ ಆಚರಿಸಲಾಯಿತು.
ಗುರುವಾರ ಬೆಳಗೊಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಬೆಳಗೋಳ ಹೋಬಳಿಯ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಬೆಳಗೊಳ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಕೆ.ರಾಜು, ರಮೇಶ್ ಮಾನ್ಗಾವ್, ಹೊಸಳ್ಳಿ ಪ್ರೌಢಶಾಲೆಯ ಮಹಮ್ಮದ್ ಆಸಿಫ್, ಕೆ.ಆರ್.ಸಾಗರದ ಎಸ್ಕ್ಯೂ ಶಾಲೆಯ ಶಿಕ್ಷಕಿ ಸವಿತಾ, ಬೆಳಗೋಳ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಗೌಡ ಅವರನ್ನು ಸನ್ಮಾನಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಬಿ.ಕುಮಾರ್ ಮಜ್ಜಿಗೆಪುರ ಕಾರ್ಯಕ್ರಮ ಉದ್ಘಾಟಿಸಿದರು. ಹೋಬಳಿ ಘಟಕದ ಅಧ್ಯಕ್ಷ ಬಿ.ರವಿಕುಮಾರ್, ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್, ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಮಾಜಿ ಅಧ್ಯಕ್ಷ ವೆಂಕಟೇಶ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಾಮಪ್ರಸಾದ್ ಪೊನ್ನುಸ್ವಾಮಿ ಹಾಗೂ ಪ್ರೌಢಶಾಲೆ, ಪ್ರಾಥಮಿಕ ಶಾಲೆಯ ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.