ಕ್ಯಾಂಪಸ್ ಸ್ವಚ್ಛಗೊಳಿಸಿದ ಪೌರಕಾರ್ಮಿಕರಿಗೆ ಸನ್ಮಾನ

18
Published on

ಮೈಸೂರು: ಇತ್ತೀಚೆಗೆ ಆಯೋಜಿಸಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಂದರ್ಭದಲ್ಲಿ ಮಾನಸ ಗಂಗೋತ್ರಿ ಕ್ಯಾಂಪಸ್ ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸಿದ 10 ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಮೈಸೂರು ವಿಶ್ವವಿದ್ಯಾಲಯ ವಿಶ್ವಮಾನವ ನೌಕರರ ವೇದಿಕೆ ವಾಲ್ಮೀಕಿ ಜಯಂತಿಯನ್ನು ವಿಭಿನ್ನವಾಗಿ ಆಚರಿಸಿತು.


ವಿಶ್ವವಿದ್ಯಾಲಯ ಸಂಜೆ ಕಾಲೇಜಿನ ಎದುರು ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಾದ ನಂಜಮ್ಮ, ಸುಜಾತಮ್ಮ, ಭಾಗ್ಯಾ, ಕಮಲಮ್ಮ, ಪಲ್ಲಮ್ಮ, ಶಿವಗಾಮಿ, ಸುಜಾತಾ, ಜಾನಕಮ್ಮ, ಎನ್.ಶಿವು, ದೇವರಾಜ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಹೆಚ್ಚುವರಿ ಎಸ್ಪಿ ಡಾ.ಬಿ.ಎನ್.ನಂದಿನಿ ಪುಷ್ಪಾರ್ಚನೆ ಮಾಡಿದರು.

ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಸಿ.ದೇವರಾಜೇಗೌಡ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಮೈವಿವಿ ಸಿಂಡಿಕೇಟ್ ಸದಸ್ಯ ದಾಮೋದರ್, ಮೈಸೂರು ವಿವಿ ಸಮಾಜ ಕಾರ್ಯವಿಭಾಗದ ಮುಖ್ಯಸ್ಥೆ ಡಾ.ಎಚ್.ಪಿ.ಜ್ಯೋತಿ, ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಡಾ.ಎಂ.ಎಸ್.ಸಪ್ನಾ, ಕಾನೂನು ವಿಭಾಗದ ಪ್ರಾಧ್ಯಾಪಕ ಡಾ.ಮಾರುತಿ, ಮೈಸೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಉಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net