ರಾಷ್ಟ್ರಪಿತನಿಗೆ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

02-10-Shiva-1
ರಾಯಚೂರಿನ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಗಾಂೀಜಿ ಪುತ್ಥಳಿಗೆ ಜಿಲ್ಲಾಡಳಿತದಿಂದ ಸೋಮವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಕೆ.ಶಾಂತಪ್ಪ, ರವೀಂದ್ರ ಜಲ್ದಾರ್, ಮುಖ್ತಿಯಾರ್ ಇದ್ದರು.
Published on

ರಾಯಚೂರು: ರಾಷ್ಟ್ರಪಿತ ಮಹಾತ್ಮಾ ಗಾಂೀಜಿ ಜಯಂತಿ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಗಾಂೀಜಿ ಪುತ್ಥಳಿಗೆ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.
ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಶಿವರಾಜ ಪಾಟೀಲ್ ಗಾಂೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗಾಂೀಜಿ ಜೀವನ ಚರಿತ್ರೆ ಕುರಿತು ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಗಾಂೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಲಾಗಿದ್ದ ಬಾಪುಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಚಿವ ಎನ್.ಎಸ್.ಬೋಸರಾಜು ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಜಿ.ಪಂ. ಯೋಜನಾ ನಿರ್ದೇಶಕ ವಿ.ಪ್ರಕಾಶ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಬಿಇಒ ಚಂದ್ರಶೇಖರ ಭಂಡಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಷಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net