ಕನ್ನಡ ಭಾಷೆಗೆ ಸದಾ ಪ್ರೋತ್ಸಾಹ : ಡಾ.ಕೆ.ವಿ.ಚಿದಾನಂದ ಅಭಿಮತ

kannada
ಕನ್ನಡದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳ ಗೌರವಾರ್ಪಣಾ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮಾತನಾಡಿದರು.
Published on

ಸುಳ್ಯ: ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಪೂರ್ಣ ಅಂಕ ಪಡೆಯುವುದು ಹೆಮ್ಮೆಯ ವಿಚಾರ, ಕನ್ನಡ ಭಾಷೆ ಬೆಳೆಯಲು ಎಲ್ಲರ ಪ್ರೋತ್ಸಾಹ, ಪ್ರಯತ್ನ ಸದಾ ಇರಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ವತಿಯಿಂದ 2023-2024ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ಸುಳ್ಯ ತಾಲೂಕಿನ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿ ಮಾತನಾಡಿದರು.

ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ, ಕನ್ನಡ ಬೆಳೆಯಬೇಕಾದರೆ ಕನ್ನಡ ಭಾಷೆ ಬಳಕೆ ಹೆಚ್ಚಬೇಕು. ಮಡಿವಂತಿಕೆ ಬಿಟ್ಟು ಭಾಷೆ ಬಳಸಬೇಕು. ಅದಕ್ಕಾಗಿ ಸಾಂಸ್ಕೃತಿಕ ನೆಲೆಗಟ್ಟಿನ ಹಿನ್ನೆಲೆಯಲ್ಲಿ ಭಾಷಾ ಕೌಶಲ ಕಲಿಸಬೇಕು. ಕನ್ನಡದ ಪರಿಸರ ನಿರ್ಮಾಣ ಮಾಡಬೇಕು. ಆಗ ಮಕ್ಕಳಲ್ಲಿ ಕನ್ನಡದ ಬಗ್ಗೆ ಆಸಕ್ತಿ ಬೆಳೆಯುತ್ತದೆ ಎಂದರು.

ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಉದ್ಘಾಟಿಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಅಧ್ಯಕ್ಷ ಬಾಬು ಗೌಡ ಅಚ್ಚಪ್ಪಾಡಿ, ಜಿಲ್ಲಾ ಕಸಾಪ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ಕಸಾಪ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ., ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

ತಾಲೂಕಿನ ವಿವಿಧ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆಯಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net