

ಗೋಣಿಕೊಪ್ಪ: ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ನೂತನವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಬುಧವಾರ ಸನ್ಮಾನಿಸಲಾಯಿತು.
ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್.ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ಅಸೋಸಿಯೇಷನ್‌ನ ವಿರಾಜಪೇಟೆ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಟ್ಟಮುಡಿ ಹಳೇ ಜುಮಾ ಮಸೀದಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡಿರುವ ಕೆಎಂಎ ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೀತಲತಂಡ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕೋಳುಮಂಡ ರಫೀಕ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕುಂಡಂಡ ಎ.ರಜಾಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಸಂಸ್ಥೆಯ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾದ ಕರತೊರೆರ ಕೆ. ಮುಸ್ತಫ, ಮಂಡೆಂಡ ಮೊಯ್ದು, ಆಲೀರ ಬಿ. ಅಬ್ದುಲ್ಲಾ, ಪೊಯಕೆರ ಎಸ್.ಮೊಹಮ್ಮದ್ ರಫೀಕ್, ದುದ್ಧಿಯಂಡ ಎಚ್.ಮೊಯ್ದು, ಕುಪ್ಪೋಡಂಡ ಎ. ರಶೀದ್, ಪುದಿಯಾಣೆರ ಹನೀಫ್, ಆಲೀರ ಎಚ್. ಅಬ್ದುಲ್ ಲತೀಫ್, ಪುಡಿಯಂಡ ಹನೀಫ್, ಆಲೀರ ಎಂ. ರಶೀದ್ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ ಉಪಸ್ಥಿತರಿದ್ದರು.