ವಾಸು ನಿಧನಕ್ಕೆ ಶ್ರದ್ಧಾಂಜಲಿ ಅರ್ಪಣೆ

IMG-20240310-WA0083
Published on

ಚಾಮರಾಜನಗರ: ರಾಜಕೀಯ, ಶೈಕ್ಷಣಿಕ ಹಾಗೂ ಪತ್ರಿಕಾ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿ ವಾಸು ಅವರು ನಿಧನ ಹೊಂದಿರುವುದು ಪತ್ರಿಕಾ ರಂಗಕ್ಕೆ ತುಂಬಾಲಾರದ ನಷ್ಟವಾಗಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ದೇವರಾಜು ನಾಯ್ಡು ತಿಳಿಸಿದರು.


ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮಾಜಿ ಶಾಸಕ ಹಾಗೂ ಸಂಪಾದಕ ವಾಸು ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ವಾಸು ಅವರು ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಹಾಗೂ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಜತೆಗೆ ಪತ್ರಿಕಾ ರಂಗದಲ್ಲಿ ದುಡಿದು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಇಂತಹ ಪ್ರಾಮಾಣಿಕ ವ್ಯಕ್ತಿಗಳು ಇತ್ತೀಚಿನ ದಿನಗಳಲ್ಲಿ ಸಿಗುವುದು ಅತ್ಯಂತ ವಿರಳ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.


ಪತ್ರಕರ್ತ ಮಣಗಳ್ಳಿ ಮಹಾದೇವ ಮಾತನಾಡಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ಗೌಡ, ಜಿಲ್ಲಾ ನಿರ್ದೇಶಕ ಅಜ್ಜಿಪುರ ಸುರೇಶ್, ಪತ್ರಕರ್ತರಾದ ಸೋಮಶೇಖರ್ ಮಹದೇವಸ್ವಾಮಿ, ರವಿ, ಗೋವಿಂದ, ಮಂಜೇಶ್ ಉಸ್ಮಾನ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net