ಹಿರಿಯ ಛಾಯಾಗ್ರಾಹಕರಿಗೆ ಗೌರವ

gan (6)
Published on

ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ, ಕುಂದಾಪುರ, ಬೈಂದೂರು ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಶ್ರೀ ರಾವೇಂದ್ರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆಯಿತು.

ಕುಂದಾಪುರ, ಬೈಂದೂರು ವಲಯದ ಅಧ್ಯಕ್ಷ ದಿವಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಛಾಯಾಗ್ರಾಹಕ ಜಗದೀಶ್ ಕಾಯ್ಕಿಣಿ, ಜಾರ್ಜ್ ಡೆಸಾ ಮತ್ತು ಶ್ರೀಧರ ಹೆಗ್ಡೆ ಅವರನ್ನು ಗೌರವಿಸಲಾಯಿತು.

ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ವಾಜಿ ಜಿಲ್ಲಾ ಸಂಚಾಲಕ ವಿಠಲ ಚೌಟ, ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಕೊರಿಯಾ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಜ್, ನಾಗರಾಜ್ ರಾಯಪ್ಪನಮಠ, ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ, ನಿಯೋಜಿತ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಹರೀಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ ಮಠ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ರಾು ವಿಠಲವಾಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net