

ಮಡಿಕೇರಿ: ಹುತಾತ್ಮ ಯೋಧರಿಗೆ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಆವರಣದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರು ಮನು ಮಂಜುನಾಥ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಪೂವಯ್ಯ ಹಾಗೂ ನಗರ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.