

ಹೊಳೆನರಸೀಪುರ: ಪಟ್ಟಣದ ಕಾಂಗ್ರೆಸ್ ಭವನದ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ, ಎಸ್.ಎಂ. ಕೃಷ್ಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರವನ್ನು ಹೈಟೆಕ್ ನಗರವನ್ನಾಗಿ ಮಾಡಲು ಪಣ ತೊಟ್ಟು ಅದರಲ್ಲಿ ಯಶಸ್ಸು ಕಂಡರು. ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಯಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಎಸ್‌ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. ಇವರ ಆತ್ಮಕ್ಕೆ ಶಾಂತಿ ಸಿಗುವುದರ ಜತೆಗೆ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಿವಕುಮಾರ್, ಸದಸ್ಯ ಎಚ್.ಆರ್. ಪ್ರಸನ್ನ ಕುಮಾರ್, ಕೆಡಿಪಿ ಸದಸ್ಯ ಬಿ.ಎ.ಪ್ರಸಾದ್, ಮಹಮದ್ ರಿಯಾಜ್, ಕೃಷ್ಣೇಗೌಡ, ಅಶ್ವತ, ಶಿವಣ್ಣ, ಕಮಲಮ್ಮ, ಲಲಿತಾ, ಇಕ್ರಂ, ಹರೀಶ್, ನಾಗರಾಜು, ಪ್ರಕಾಶ, ಜೀಶನ್ ಅಲಿ ಇತರರು ಇದ್ದರು.