

ಮಡಿಕೇರಿ: ಇತ್ತೀಚೆಗೆ ನಿಧನರಾದ ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮಾಜಿ ಕೊಡಗು ಜಿಲ್ಲಾ ಪಂಚಾಯತ್ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ ಅವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಮಾತನಾಡಿ, ಶಿವುಮಾದಪ್ಪ ನವರ ವ್ಯಕ್ತಿತ್ವ ಅತ್ಯಂತ ಅಪರೂಪದ ವ್ಯಕ್ತಿತ್ವವಾಗಿದ್ದು ಕ್ಷಣಮಾತ್ರದಲ್ಲಿ ಜನರನ್ನು ಸೆಳೆಯುವ ವರ್ಣರಂಜಿತ ವ್ಯಕ್ತಿಯಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ ಯಶಸ್ವಿಯಾಗಿ ನಿಭಾಯಿಸಿದ ಶಿವು ಮಾದಪ್ಪ ನವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಜನಪ್ರತಿನಿಧಿಯಾಗಿ, ರಾಜಕಾರಿಣಿಯಾಗಿ, ಸಮಾಜ ಸೇವಕರಾಗಿ ಜಿಲ್ಲೆಯಲ್ಲಿ ಜನಾನುರಾಗಿದ್ದರು. ಶಿವು ಮಾದಪ್ಪ ನವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದರು.
ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಅವರು ಸ್ನೇಹಜೀವಿಯಾಗಿದ್ದ ಶಿವು ಮಾದಪ್ಪ ನವರೊಂದಿಗಿನ ಒಡನಾಟವನ್ನು ಸ್ಮರಿಸಿದರು.
ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ಕೆಪಿಸಿಸಿ ಸದಸ್ಯರಾದ ಬೇಕಲ್ ರಮಾನಾಥ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್, ಎಚ್.ಎ.ಹಂಸ, ಇಸ್ಮಾಯಿಲ್ ಇತರರಿದ್ದರು.