

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಗುರುವಾರ ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ, ಪಂಜಿನ ಮೆರವಣಿಗೆ ನಡೆಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಲಾಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ ಮತ್ತಿತರರಿದ್ದರು.