ಮಹಿಳೆಯರಿಗೆ ತ್ರಿಶೂಲ ದೀಕ್ಷೆ 9ರಂದು

WhatsApp Image 2024-06-06 at 8.11.57 PM
Published on

ಧಾರವಾಡ: ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶ್ರೀರಾಮ ಸೇನೆಯಿಂದ ಜೂ. 9ರಂದು ವಿದ್ಯಾಗಿರಿಯ ಸಭಾಂಗಣದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಾಗುವುದು. ಬೀಳಗಿ ಮಠದ ವಚನಶ್ರೀ ಸಾನ್ನಿಧ್ಯ ವಹಿಸುವರು. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ, ಸಚಿನ್ ಕುಲಕರ್ಣಿ ಕಾನೂನು ಸಲಹೆ ನೀಡಲಿದ್ದಾರೆ ಎಂದರು.
ರಾಜ್ಯ ಸರ್ಕಾರ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುತ್ತಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಹೋರಾಟ ಮಾಡಲಾಗುವುದು. ಹಿಂದು ಹೆಣ್ಣು ಮಕ್ಕಳ ನೆರವಿಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭಿಸಲಾಗಿದ್ದು, ಅಗತ್ಯ ಇದ್ದವರು ಸದುಪಯೋಗ ಪಡೆಯಬೇಕು ಎಂದರು.
ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net