ತ್ರಿವೇಣಿ ಸಂಗಮದಲ್ಲಿ ಜೊಲ್ಲೆ ಕುಟುಂಬ ಪುಣ್ಯಸ್ನಾನ

17Anand3
ಉತ್ತರ ಪ್ರದೇಶದ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಜೊಲ್ಲೆ ಕುಟುಂಬದವರು ಪುಣ್ಯಸ್ನಾನ ಮಾಡಿದರು.
Published on

ಚಿಕ್ಕೋಡಿ ಗ್ರಾಮೀಣ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜೊಲ್ಲೆ ಕುಟುಂಬದ ಸದಸ್ಯರು ತ್ರಿವೇಣಿ ಸಂಗಮದಲ್ಲಿ ಭಾನುವಾರ ಪುಣ್ಯ ಸ್ನಾನ ಮಾಡಿದರು.

ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಯುವ ಮುಖಂಡರಾದ ಬಸವಪ್ರಸಾದ ಜೊಲ್ಲೆ, ಜ್ಯೋತಿ ಪ್ರಸಾದ ಜೊಲ್ಲೆ, ಪ್ರಿಯಾ ಜೊಲ್ಲೆ, ಯಶಸ್ವಿನಿ ಜೊಲ್ಲೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಗೈದರು.

ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿಶೇಷ ಪ್ರಯತ್ನದಿಂದ ಮಹಾಕುಂಭಮೇಳ ಯಶಸ್ವಿಯಾಗಿ ಜರುಗುತ್ತಿದ್ದು, ನಿತ್ಯ ಲಕ್ಷಾಂತರ ಜನರು ಪುಣ್ಯಸ್ನಾನ ಮಾಡುತ್ತಿದ್ದಾರೆ. ನಾವು ಕುಟುಂಬ ಸಮೇತ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದೆವು. ಇದೊಂದು ಅವಿಸ್ಮರಣೀಯ ಕ್ಷಣ ಎಂದು ಹರ್ಷ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net