ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ತೊಂದರೆ

New JOshi New
Published on

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ತೊಂದರೆ ಕೊಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ದೂರಿದ್ದಾರೆ.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಪ್ರಚಾರ ಮಾಡುವ ಅವಶ್ಯಕತೆಯಾದರೂ ಏನಿತ್ತು ? ಎಂದು ಪ್ರಶ್ನಿಸಿದರು.

ಬಿಜೆಪಿ ನೇತೃತ್ವದ ಕೇಂದ್ರದ ಎನ್​ಡಿಎ ಸರ್ಕಾರ ಹಲವಾರು ಯೋಜನೆಗಳನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿಗೆ ತಂದಿದೆ. ಅವುಗಳ ಬಗ್ಗೆ ಪ್ರಚಾರ ತೆಗೆದುಕೊಳ್ಳುವುದರಲ್ಲಿ ಯಾವುದೇ ತಪು್ಪ ಇಲ್ಲ. ಆದರೆ, ಕಾರ್ವಿುಕ ಸಚಿವರು ಇದರ ಬಗ್ಗೆ ಏಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಕೇಂದ್ರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ಸರ್ಕಾರ ತನ್ನ ಅಕ್ಕಿಯೆಂದು ಉದ್ರಿ ಪ್ರಚಾರ ಪಡೆದುಕೊಳ್ಳುತ್ತಿಲ್ಲವೇ ? ಎಂದು ಟೀಕಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಲಕ್ಷಾಂತರ ಮನೆಗಳು ನಿಮಾಣವಾಗಿವೆ. ಸಚಿವ ಸಂತೋಷ ಲಾಡ್ ಹಳ್ಳಿಗೆ ಹೋಗಿಲ್ಲ. ಹಾಗಾಗಿ, ಅವರಿಗೆ ಈ ವಿಷಯ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಹಿಂದ್ ಮತಗಳ ಗಮನದಲ್ಲಿಟ್ಟುಕೊಂಡು ಚುನಾವಣೆ ಮಾಡುತ್ತಿದೆ. 1996 ರಿಂದ ಎಲ್ಲ ಸಮುದಾಯದ ಜನ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿದೆ. ಇದರ ಪರಿಣಾಮವಾಗಿ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net