

ರಾಘವೇಂದ್ರ ಪೈ ಗಂಗೊಳ್ಳಿ
ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಜಂಕ್ಷನ್ ಬಳಿಯಿಂದ ಗುಜ್ಜಾಡಿ, ಗಂಗೊಳ್ಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯ ಅಲ್ಲಲ್ಲಿ ಭಾರಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರಗೊಂಡಿದೆ. ಈ ವಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಗುಂಡಿ ಬಿದ್ದ ರಸ್ತೆಯಲ್ಲಿ ಸರ್ಕಸ್ ಮಾಡುತ್ತ ಸವಾರರು ಸಂಚರಿಸುವಂತಾಗಿದೆ.
ಗಂಗೊಳ್ಳಿ ಬಂದರು ಬಸ್ ನಿಲ್ದಾಣದಿಂದ ಮೇಲ್ಗಂಗೊಳ್ಳಿ ತನಕ ಕಾಂಕ್ರೀಟ್ ಕಾಮಗಾರಿ ನಡೆದಿದೆ. ಆದರೆ ಗುಜ್ಜಾಡಿಯಿಂದ ತ್ರಾಸಿಯವರೆಗಿನ ಸುವಾರು 23 ಕಿ.ಮೀ. ದೂರದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಸವಾರರು ನಿತ್ಯ ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ತ್ರಾಸಿ ಜಂಕ್ಷನ್ ಬಳಿ ದೊಡ್ಡ ದೊಡ್ಡ ಹೊಂಡಗಳಿಂದಾಗಿ ಪ್ರಯಾಸ ಪಡುತ್ತಿದ್ದಾರೆ.
ಈ ರಸ್ತೆಯು ತ್ರಾಸಿಯಿಂದ ಗಂಗೊಳ್ಳಿಯ ಮೀನುಗಾರಿಕಾ ಬಂದರು, ಬೆಣ್ಗೆರೆ, ಕಂಚುಗೋಡಿನ ಮೀನುಗಾರಿಕಾ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನ ಸಂಚಾರವಿದೆ. ಗುಂಡಿಬಿದ್ದ ರಸ್ತೆಯಿಂದಾಗಿ ವಾಣಿಜ್ಯ ಚಟುವಟಿಕೆಗಳಿಗೂ ಅಡ್ಡಿಯಾಗುತ್ತಿದೆ.
ಈ ಮುಖ್ಯರಸ್ತೆಯ ಅನೇಕ ಕಡೆ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿದು ಸಮಸ್ಯೆಯಾಗುತ್ತಿದೆ. ಮಳೆಗಾಲ ಮುಗಿದಾಗ ಈ ರಸ್ತೆಗೆ ಮರು ಡಾಮರು ಹಾಕದೇ ಕೇವಲ ತೇಪೆ ಹಾಕುತ್ತಾರೆ. ಈ ಬಾರಿಯಾದರೂ ಸಂಬಂಧಪಟ್ಟವರು ಈ ರಸ್ತೆ ಅಭಿವೃದ್ಧಿ ಮಾಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
ತ್ರಾಸಿ-ಗಂಗೊಳ್ಳಿ ಮುಖ್ಯರಸ್ತೆ ಅವ್ಯವಸ್ಥೆ ಹಾಗೂ ನಿರ್ಲಕ್ಷ್ಯದ ವಿರುದ್ಧ ತ್ರಾಸಿ ಗ್ರಾಮ ಪಂಚಾಯಿತಿಯಿಂದ ದೂರು ನೀಡಲಾಗಿತ್ತು. ತ್ರಾಸಿ ಗ್ರಾಪಂ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪಿಡಬ್ಲೂೃಡಿ ಇಲಾಖೆ ಕುಂದಾಪುರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಇಲಾಖೆ ಇಂಜಿನಿಯರ್ ಪರಿಶೀಲನೆ ನಡೆಸಿದ್ದು, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ತ್ರಾಸಿಯಿಂದ ಗುಜ್ಜಾಡಿವರೆಗಿನ ಸುವಾರು 23 ಕಿ.ಮೀ. ದೂರದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಈ ವಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಪ್ರತಿ ಮಳೆಗಾಲ ಮುಗಿದಾಗಲೂ ಈ ರಸ್ತೆಗೆ ತೇಪೆ ಹಾಕುವುದು ಬಿಟ್ಟರೆ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಮರು ಡಾಮರು ಕಾಮಗಾರಿ ಮಾಡುವಂತೆ ಅನೇಕ ವರ್ಷಗಳಿಂದ ಆಗ್ರಹಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. -ಮಿಥುನ್ ಎಂ.ಡಿ.ಬಿಜೂರು, ತ್ರಾಸಿ ಗ್ರಾಪಂ ಅಧ್ಯಕ್ಷ https://www.vijayavani.net/steps-to-provide-fast-superior-customer-service https://www.vijayavani.net/udupi-police-arrest-two-people-for-transporting-narcotics-gaanja