ಮೈಸೂರಿನಲ್ಲಿ ಹೊತ್ತಿ ಉರಿದ ಟ್ರಕ್

Fire (2)
Published on

ಮೈಸೂರು: ನಗರದ ಬೋಗಾದಿ ವರ್ತುಲ ರಸ್ತೆಯಲ್ಲಿ ಬುಧವಾರ ಮುಂಜಾನೆ ಚಲಿಸುತ್ತಿದ್ದ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಟ್ರಕ್ ಹೊತ್ತಿ ಉರಿದಿದೆ.

ರಾಜಸ್ತಾನದ ನೋಂದಣಿ ಹೊಂದಿರುವ ಟ್ರಕ್ ಚಲಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿತು. ಟ್ರಕ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟ್ರಕ್‌ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net