ಸಿಗಂದೂರು ವ್ಯವಸ್ಥೆ ಕೆಡಿಸಲು ಹುನ್ನಾರ

raju tallur (2)
Published on

ಸೊರಬ: ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಒಳಪಡಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಷಡ್ಯಂತ್ರ ರೂಪಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಹೇಳಿದರು.

ಸೋಮವಾರ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರ ಪರಿಶ್ರಮದಿಂದ ದೇವಸ್ಥಾನ ಅಭಿವೃದ್ಧಿ ಕಂಡಿದೆ. ಕ್ಷೇತ್ರದ ಮಹಿಮೆ ಸಹಿಸದ ಕೆಲ ವ್ಯಕ್ತಿಗಳು ಅರ್ಚಕ ಶೇಷಗಿರಿ ಭಟ್ ಅವರನ್ನು ಮುಂದಿಟ್ಟುಕೊಂಡು ವ್ಯವಸ್ಥೆ ಕೆಡಿಸಲು ಹೊರಟಿದ್ದಾರೆ. ಶಾಸಕ ಕುಮಾರ್ ಬಂಗಾರಪ್ಪ ಅವರು ವಿವಾದವನ್ನು ತಿಳಿಗೊಳಿಸಲು ಮುಂದಾಗದೆ ಮತ್ತಷ್ಟು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದುಳಿದ ಸಮುದಾಯಕ್ಕೆ ಸೇರಿರುವ ದೇವಸ್ಥಾನವನ್ನು ಉಳಿಸಿಕೊಳ್ಳಲು ತಳ ಸಮುದಾಯ ಒಂದಾಗುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಮಡಿವಾಳ ಸಮುದಾಯ ರಾಮಪ್ಪ ಅವರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದರು.

ಸಹೋದರರ ಕಲಹದಿಂದಾಗಿ ತಾಲೂಕಿನ ಅಭಿವೃದ್ಧಿ ಕುಂಠಿತಗೊಂಡಿದೆ. ಬಗರ್​ಹುಕುಂ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಕಮಿಷನ್ ಪಡೆದು ಸಾಗುವಳಿ ಚೀಟಿ ನೀಡಿದರೆ, ಈಗಿನ ಶಾಸಕ ಕುಮಾರ್ ಬಂಗಾರಪ್ಪ ಹಕ್ಕುಪತ್ರ ರದ್ದುಪಡಿಸುವ ಮೂಲಕ ಬಡ ಸಾಗುವಳಿದಾರರ ಬದುಕಿಗೆ ಕಂಟಕವಾಗಿದ್ದಾರೆ ಎಂದು ದೂರಿದರು.

ಮುಂದಿನ ಒಂದು ತಿಂಗಳಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬದಲಾವಣೆಗೊಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಪ್ರಾಶಸ್ಱ ಸಿಗುವುದು ಎಂದುರು.

ಸಭೆಯಲ್ಲಿ ತಾಲೂಕು ಮಹಿಳಾ ಅಧ್ಯಕ್ಷೆ ಸá-ಮಾ ಗಜಾನನ, ಮುಖಂಡರಾದ ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಹಾಲಸ್ವಾಮಿ ಉಳವಿ, ಎಂ.ಎಂ.ಭಾರತಿ, ಸುಬ್ರಹ್ಮಣ್ಯ ನೆಮ್ಮದಿ, ಕೆರಿಯಪ್ಪ, ಹಿರಣ್ಯಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net