ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಿ

18 LXR 1
Published on

ಲಕ್ಷ್ಮೇಶ್ವರ: ಪಟ್ಟಣದಲ್ಲಿರುವ 148 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆಗೆ ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಭೇಟಿ ನೀಡಿದರು.
ಈ ವೇಳೆ ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ, ಶಾಲೆಯಲ್ಲಿ 2 ಹೊಸ ಕೊಠಡಿಗಳ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಬಿದ್ದಿರುವ ವರ್ಗ ಕೋಣೆಗಳನ್ನು ನಿರ್ಮಿಸಲು ಅನುದಾನ ಕಲ್ಪಿಸುವಂತೆ ಮನವಿ ಮಾಡಿದರು.
ಎಸ್.ವಿ. ಸಂಕನೂರ ಮಾತನಾಡಿದ, ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯ, ಗುಣಮಟ್ಟದ ಶಿಕ್ಷಣ, ನುರಿತ ಶಿಕ್ಷಕ ವೃಂದದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ದಾಖಲಾತಿ ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ನಾಯಕ್, ಶಿಕ್ಷಣ ಸಂಯೋಜಕ ಉಮೇಶ ಹುಚ್ಚಣ್ಣವರ, ಸಿಆರ್‌ಪಿಗಳಾದ ಉಮೇಶ ನೇಕಾರ, ಸತೀಸ ಬೋಮಲೆ, ಮುಖ್ಯೋಪಾಧ್ಯಾಯ ಬಿ.ಎಂ. ಕುಂಬಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net