ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಿ

11-11-Shiva-4
ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆಗೆ ಚಾಲನೆ ನೀಡಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ ಅಹ್ಮದ್, ಕಲಬುರಗಿ ಅಪರ ಆಯುಕ್ತರ ಕಚೇರಿ ಉಪ ನಿರ್ದೇಶಕ ವಸಂತ ಭಂಡಾರಿ, ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದರ ಇದ್ದರು.
Published on

ರಾಯಚೂರು: ಇತ್ತೀಚೆಗೆ ಏಷ್ಯಾ ಕಪ್‌ನಲ್ಲಿ ದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಗೈದು ದೇಶಕ್ಕೆ ಗರಿಮೆ ತಂದಿದ್ದು, ಅದರಂತೆ ಕಲ್ಯಾಣ ಕರ್ನಾಟಕ ಭಾಗದ ಯುವಕರು ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಉನ್ನತ ಸಾಧನೆಗೈಯಲು ಪ್ರಯತ್ನಿಸಬೇಕು ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸಿ ಪೋಷಕರಿಗೆ, ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಬೇಕು. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಬೇಕಾದ ತಯಾರಿ ನಡೆಸಬೇಕುಎಂದು ಹೇಳಿದರು.
ಡಿಡಿಪಿಐ ಕೆ.ಡಿ.ಬಡಿಗೇರಾ ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ನಿರ್ಣಾಯಕರು ನಿಷ್ಪಕ್ಷಪಾತವಾಗಿ ನಿರ್ಣಯ ನೀಡಬೇಕು. ಕ್ರೀಡಾಪಟುಗಳು ಕೂಡಾ ನಿರ್ಣಾಯಕರ ನಿರ್ಣಯಕ್ಕೆ ಬದ್ಧರಾಗಿರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ ಅಹ್ಮದ್, ಕಲಬುರಗಿ ಅಪರ ಆಯುಕ್ತರ ಕಚೇರಿ ಉಪ ನಿರ್ದೇಶಕ ವಸಂತ ಭಂಡಾರಿ, ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net