ಅಕ್ರಮವಾಗಿ ನಗರದಲ್ಲಿ ನೆಲೆಸಿದಲ್ಲದೇ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಬಂಧನ

drug case
Published on

ಬೆಂಗಳೂರು: ಅಕ್ರಮವಾಗಿ ನಗರದಲ್ಲಿ ನೆಲೆಸಿದಲ್ಲದೇ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 13 ಗ್ರಾಂ 61 ಮಿಲಿ ತೂಕದ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.

ಜೇಮ್ಸ್ ಇಪೊಲುವಾ ಓವಾಲೆ(26) ಬಂಧಿತ ನೈಜೀರಿಯಾ ಪ್ರಜೆ. ಆರೋಪಿಯು ಬೆಂಗಳೂರು ಉತ್ತರ ತಾಲೂಕು ವಿದ್ಯಾರಣ್ಯ ಪುರದ ವಡೇರಹಳ್ಳಿ ಲೇಔಟ್‌ನಲ್ಲಿ ನೆಲೆಸಿದ್ದನು.

ಸುಮ್ಮನಹಳ್ಳಿಯ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಆತ ವಾಸಿಸುತ್ತಿದ್ದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮಾದಕ ವಸ್ತು ವಶ ಪಡಿಸಿಕೊಂಡಿದ್ದಾರೆ. ಆರೋಪಿಯು ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದು, ಈತನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net