ಕರ್ತವ್ಯ ನಿರ್ವಹಣೆಗೆ ತಾತ್ಕಾಲಿಕ ಅನುಮತಿ

tubgere meeting
Published on

ವಿಜಯವಾಣಿ ಸುದ್ದಿಜಾಲ ತೂಬಗೆರೆ
ಹೋಬಳಿ ಮೆಳೇಕೋಟೆ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ಕರ್ತವ್ಯಕ್ಕೆ ಗ್ರಾಮಸ್ಥರು ಅಡ್ಡಪಡಿಸಿದ ಪ್ರಕರಣಕ್ಕೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಶಿಕ್ಷಕಿಗೆ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಉಪವಿಭಾಗಾಧಿಕಾರಿ ಹಾಗೂ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ಸಭೆ ಗ್ರಾಮಸ್ಥರಿಗೆ ಸೂಚನೆ ನೀಡಿದೆ.
ಶಿಕ್ಷಕಿ ಆನಂದಮ್ಮ ಅವರಿಗೆ ಅಂಗನವಾಡಿ ಪ್ರವೇಶಕ್ಕೆ ಗ್ರಾಮಸ್ಥರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಸೋಮವಾರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ವಿಭಾವಿದ್ಯಾ ರಾಥೋಡ್ ಇನ್ನಿತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.
ಶಿಕ್ಷಕಿಗೆ ಕಾರ್ಯನಿರ್ವಹಿಸಲು ಗ್ರಾಮಸ್ಥರು ಸಹಕಾರ ನೀಡಬೇಕು. ದೊಡ್ಡರಾಯಪ್ಪನಹಳ್ಳಿಯಲ್ಲಿ ಆನಂದಮ್ಮ ವಾಸವಿರುವ ಬಗ್ಗೆ ತಹಸೀಲ್ದಾರ್ ದೃಢೀಕರಣ ಪತ್ರ ನೀಡಿದ್ದು, ವಿಳಾಸದಲ್ಲಿ ಗೊಂದಲವಿಲ್ಲ. ಆದರೂ, ಗ್ರಾಮಸ್ಥರು ಕರಾರು ಅರ್ಜಿ ಸಲ್ಲಿಸಿರುವ ಕಾರಣ ವಿಳಾಸ ದೃಢೀಕರಣ ಪರಿಶೀಲಿಸಿ ವರದಿ ನೀಡುವವರೆಗೂ ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಉಪವಿಭಾಗಾಧಿಕಾರಿ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಆನಂದಮ್ಮ ಕರ್ತವ್ಯಕ್ಕೆ ಮರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net