

ವಿಜಯವಾಣಿ ಸುದ್ದಿಜಾಲ ತೂಬಗೆರೆ
ಕಾಲೇಜು ಸಮಯಕ್ಕೆ ಸರಿಯಾಗಿ ಹೆಚ್ಚುವರಿ ಬಸ್‌ಗಳನ್ನು ನೀಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಪಾಲ್‌ಪಾಲ್‌ದಿನ್ನೆ ಗ್ರಾಮದಲ್ಲಿ ವಿದ್ಯಾರ್ಥಿಗಳು ಎಸ್.ಎಸ್.ಘಾಟಿ ದೊಡ್ಡಬಳ್ಳಾಪುರ ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ಮಾರುತಿ ಮಾತನಾಡಿ, ಯಾವುದೇ ಉದ್ದೇಶಪೂರ್ವಕವಾಗಿ ಪ್ರತಿಭಟನೆ ಮಾಡುತ್ತಿಲ್ಲ. ನಮಗೆ ಸ್ಟೂಡೆಂಟ್ ಪಾಸ್ ನೀಡಿ ಸಕಾಲಕ್ಕೆ ಬಸ್ ವ್ಯವಸ್ಥೆ ಮಾಡಿಲ್ಲ. ಕಾಲೇಜು ಸಮಯಕ್ಕೆ ಬಸ್‌ಗಳು ಸರಿಯಾಗಿ ಬರುತ್ತಿಲ್ಲ. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಮಾಡಲಿ. ಈ ಬಗ್ಗೆ 2 ವರ್ಷಗಳಿಂದ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಸ್ಥಳಕ್ಕೆ ಹೆಡ್‌ಕಾನ್‌ಸ್ಟೇಬಲ್ ಆಗಮಿಸಿ ಡಿಪೋ ಮ್ಯಾನೇಜರ್‌ಗೆ ೆನ್ ಮೂಲಕ ಸಂಪರ್ಕಿಸಿದಾಗ, ಡಿಪೋ ಮ್ಯಾನೇಜರ್ ಆ.16ರಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ ನಂತರ ಪ್ರತಿಭಟನೆ ವಾಪಸ್ ಪಡೆದರು.
ಘಾಟಿ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ತಡೆದಿರುವುದರಿಂದ ವಾಹನ ದಟ್ಟನೆ ಉಂಟಗಿತ್ತು, 200-300 ವಿದ್ಯಾರ್ಥಿಗಳು ನಿತ್ಯ ಶಾಲಾ ಕಾಲೇಜಿಗಾಗಿ ನಗರಕ್ಕೆ ಪ್ರಯಾಣಿಸುತ್ತಾರೆ. ಜತೆಗೆ ಭಕ್ತರು ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ಕೊಡುತ್ತಾರೆ. ಹಾಗಾಗಿ ಹೆಚ್ಚುವರಿ ಬಸ್ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು ಇದ್ದರು. ಎಪಿವಿಪಿಯ ಸುಬ್ರಹ್ಮಣ್ಯ ಇದ್ದರು.