ಪಂಚಾಯಿತಿಗಳಿಗೆ ಕ್ಷಯರೋಗಮುಕ್ತ ಪ್ರಶಸ್ತಿ : ಜಿಲ್ಲಾ ನಿಯಂತ್ರಣ ಮಂಡಳಿ ಸಭೆಯಲ್ಲಿ ನಿರ್ಧಾರ

New Project (14)
Published on

ಕಾಸರಗೋಡು: ಜಿಲ್ಲೆಯ 10 ಪಂಚಾಯಿತಿಗಳಿಗೆ ಕ್ಷಯರೋಗಮುಕ್ತ ಪ್ರಶಸ್ತಿ ನೀಡುವ ಶಿಫಾರಸಿಗೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಿದೆ. ನಾಲ್ಕು ಪಂಚಾಯಿತಿಗಳಿಗೆ ಬೆಳ್ಳಿ ಹಾಗೂ ಆರು ಪಂಚಾಯಿತಿಗಳಿಗೆ ಕಂಚಿನ ಪದಕ ಲಭಿಸಲಿದೆ.

ಎಡಿಎಂ ಅಖಿಲ್ ಮುಂದಾಳುತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯಲ್ಲಿ ಕ್ಷಯರೋಗ ತಡೆ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಲಾಯಿತು. ಜಿಲ್ಲೆಯ ಎಲ್ಲ ಪಂಚಾಯಿತಿಗಳನ್ನು ಕ್ಷಯರೋಗಮುಕ್ತ ಎಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗಡಿಯಲ್ಲಿನ ಚಟುವಟಿಕೆಗಳನ್ನು ಸಮನ್ವಯಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯನ್ನು ಒಳಗೊಂಡ ಗಡಿಯಾಚೆಗಿನ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಸರ್ಕಾರದ ಆದೇಶವನ್ನು ಪರಿಗಣಿಸಿ, ಸ್ಥಳೀಯಾಡಳಿತ ಸಂಸ್ಥೆಗಳು ರೋಗಿಗಳಿಗೆ ಪೌಷ್ಟಿಕಾಹಾರದ ಕಿಟ್ ಪೂರೈಸುವ ಯೋಜನೆ ಸಿದ್ಧಪಡಿಸಲು ಸಭೆ ನಿರ್ಧರಿಸಿತು.

ಜಿಲ್ಲಾ ಟಿಬಿ ಅಧಿಕಾರಿ ಡಾ.ಆರತಿ ರಂಜಿತ್, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ಸಂತೋಷ್ ಬಿ, ಜಿಲ್ಲಾ ವಾರ್ತಾ ಮತ್ತು ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ಜಿಲ್ಲಾ ವೈದ್ಯಾಧಿಕಾರಿ(ಹೋಮಿಯೋ)ಡಾ.ಎ.ಕೆ.ರೇಷ್ಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net