ಮಂಗಳವಾರ 20 ಜನರಿಗೆ ಕರೊನಾ ಸೋಂಕು, ಮಹಿಳೆ ಸಾವು

corona
Published on

ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ 20 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ 55 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ.

ಮಂಗಳವಾರದ ಹೆಲ್ತ್ ಬುಲೆಟಿನ್‌ನಲ್ಲಿ 5 ವರ್ಷದ ಇಬ್ಬರು ಬಾಲಕಿಯರು, 10 ಪುರುಷರು ಹಾಗೂ 8 ಮಹಿಳೆಯರು ಸೇರಿದಂತೆ ಒಟ್ಟು 20 ಜನರಲ್ಲಿ ಸೋಂಕು ದೃಢಪಟ್ಟಿದೆ. ಅಥಣಿಯಲ್ಲಿ 8, ನದಿಇಂಗಳಗಾಂವದಲ್ಲಿ ಹಾಗೂ ನಿಪ್ಪಾಣಿಯಲ್ಲಿ ತಲಾ 2, ಬೆಳಗಾವಿಯ ನೆಹರು ನಗರ, ಸಹ್ಯಾದ್ರಿನಗರ, ನಿಲಜಿ, ಬೆಳಗುಂದಿ, ರಾಮದುರ್ಗ ತಾಲೂಕಿನ ಸುರೇಬಾನ, ರಾಯಬಾಗ ತಾಲೂಕಿನ ಕುಡಚಿ, ಕಾಗವಾಡದಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.

ಇಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರನ್ನು ಪರೀಕ್ಷೆಗೊಳಪಡಿಸಿದಾಗ ಕರೊನಾ ದೃಢಪಟ್ಟಿದೆ. ಉಳಿದ 18 ಸೋಂಕಿತರ ಸಂಪರ್ಕ ಪತ್ತೆ ಹಚ್ಚುವ ಕೆಲಸ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಚ್‌ಸಿ ಸೀಲ್‌ಡೌನ್: ತಾಲೂಕಿನ ಮುತಗಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆ ಯಲ್ಲಿ ಆರೋಗ್ಯ ಇಲಾಖೆಯು ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಿದೆ. ಸೋಂಕಿತೆ ಕೋವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವಾರದ ಶಿಫ್ಟ್ ಮುಗಿದ ಕಾರಣ ನಾಲ್ಕೈದು ದಿನಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ವೈದ್ಯೆ ಅನೇಕರಿಗೆ ಚಿಕಿತ್ಸೆ ನೀಡಿದ್ದರು. ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕೆಲಸದಲ್ಲಿ ಆರೋಗ್ಯ ಮುಂದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net