Bowing in the House ಪದ್ಮಶ್ರೀ ತುಳಸಿ ಗೌಡ ನಿಧನ : ಸದನದಲ್ಲಿ ನಮನ, 1 ನಿಮಿಷ ಮೌನ

Bowing in the House
Published on

ಕಾರವಾರ/Bowing in the House: ಪದ್ಮಶ್ರೀ ತುಳಸಿ ಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಮಂಗಳವಾರ ಸಂತಾಪ ಸೂಚಿಸಲಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾದಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು.

ತುಳಸಿ ಗೌಡ ಅವರು 1944ರ ಡಿಸೆಂಬರ್ 16ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು 'ಪರಿಸರವೇ ನನ್ನ ಉಸಿರು' ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ 'ವೃಕ್ಷ ಮಾತೆ' ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು.

Bowing in the House

ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ ಮರಗಳ ಎಲ್ಲಾ ಮಾಹಿತಿಗಳ ಅರಿವನ್ನು ಹೊಂದಿದ್ದರು. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯವರು ಅರಣ್ಯದಲ್ಲಿ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಹಾಗೂ ಪೋಷಿಸುವ ದಿನಗೂಲಿ ನೌಕರಿಯನ್ನು ನೀಡಿದ್ದರು.

ಕಾಡಿನಿಂದ ಅಪರೂಪದ ಬೀಜ ಸಂಗ್ರಹಿಸಿ, ಸಸಿಗಳನ್ನು ಬೆಳಸಿ ಅದೇ ಸಸಿಗಳನ್ನು ಅರಣ್ಯದಲ್ಲಿ, ಸರ್ಕಾರಿ ಕಛೇರಿ, ಶಾಲಾ ಆವರಣ, ರಸ್ತೆಯ ಪಕ್ಕದಲ್ಲಿ ಬೆಳೆಸಿದ ಕೀರ್ತಿ ಇವರದ್ದಾಗಿದೆ. ಯಾವ ಯಾವ ಮರದಿಂದ ಏನೇನು ಪ್ರಯೋಜನ, ಯಾವ ಜಾತಿಯ ಸಸಿಗಳಿಗೆ ಎಷ್ಟು ನೀರಿನ ಅವಶ್ಯಕತೆ ಇದೆ ಮುಂತಾದ ಹಲವಾರು ಮಾಹಿತಿಗಳ ಕಣಜವಾಗಿದ್ದ ಶ್ರೀಯುತರು 'ಅರಣ್ಯದ ವಿಶ್ವಕೋಶ' ಎಂದೇ ಜನಜನಿತರಾಗಿದ್ದರು.

ಶ್ರೀಯುತರ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳಲ್ಲದೆ ರಾಜ್ಯೋತ್ಸವ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

ಶ್ರೀಯುತರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ಪರಿಸರ 'ವೃಕ್ಷ ಮಾತೆ'ಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು. Bowing in the House

ಸಭಾ ನಾಯಕರು ಮತ್ತು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿ, ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದರು.

ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿ ಸಂತಾಪ ಸಲ್ಲಿಸಿದರು. Bowing in the House

ಕಾಗೇರಿ, ರೂಪಾಲಿ ಸಂತಾಪ

ತುಳಸಿ ಗೌಡ ಅಗಲಿಕೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ತೀವ್ರ ನೋವು, ಆಘಾತವನ್ನು ಉಂಟುಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ತುಳಸಿ ಗೌಡ ಅವರನ್ನು ನಾನು ರವಿವಾರ ಸಂಜೆ ಭೇಟಿ ಮಾಡಿ ಕೆಲ ಸಮಯ ಅವರೊಂದಿಗಿದ್ದು, ಅವರ ಕುಟುಂಬದವರೊಂದಿಗೆ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೆ. ಕುಟುಂಬದವರೊಂದಿಗೆ ನಾನಿರುವುದಾಗಿ ಧೈರ್ಯ ತುಂಬಿದ್ದೆ. ಶೀಘ್ರದಲ್ಲಿ ಚೇತರಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸಿದ್ದೆ. ಸೋಮವಾರ ಅವರ ನಿಧನರಾದ ಸುದ್ದಿ ತಿಳಿದು ತೀವ್ರ ನೋವು ಉಂಟಾಯಿತು ಎಂದಿದ್ದಾರೆ.

ಹಾಲಕ್ಕಿ ಸಮಾಜದ ನಮ್ಮೆಲ್ಲರ ಹೆಮ್ಮೆಯ ತುಳಸಿ ಗೌಡ ನಮ್ಮ ಕ್ಷೇತ್ರ, ರಾಜ್ಯ ಹಾಗೂ ರಾಷ್ಟ್ರದ ಅನರ್ಘ್ಯ ರತ್ನ. ಬಡತನದ ಬದುಕಿನಲ್ಲೂ ವೃಕ್ಷಪ್ರೇಮ ಮೆರೆದು ಪರಿಸರವನ್ನು ಶ್ರೀಮಂತಗೊಳಿಸಿದ ಅವರ ಅಗಲಿಕೆಯಿಂದ ನಮ್ಮೆಲ್ಲರಿಗೆ, ಪರಿಸರಕ್ಕೆ, ಈ ನಾಡಿಗೆ ತುಂಬಲಾರದ ಹಾನಿ ಉಂಟಾದAತಾಗಿದೆ ಎಂದಿದ್ದಾರೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂದೇಶ ನೀಡಿ, ಮನೆಯಲ್ಲಿ ತೀರಾ ಬಡತನವಿದ್ದರೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ ಪರಿಸರ ಪ್ರೇಮಿ ತುಳಸಿ ಗೌಡ.ಒಬ್ಬ ಪರಿಸರ ಪ್ರೇಮಿ,ಸಂಸ್ಕೃತಿ ಸಂರಕ್ಷಕಿಯಾಗಿದ್ದ,ಅದಮ್ಯ ಚೇತನವನ್ನು ನಾಡು ಕಳೆದುಕೊಂಡAತಾಗಿದೆ ಎಂದು ಕಾಗೇರಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net