ತುಳು 2ನೇ ಅಧಿಕೃತ ಭಾಷೆಯಾಗಿ ಪರಿಶೀಲನೆ: ಮಧು ಬಂಗಾರಪ್ಪ

udp-madhu
Published on

ಉಡುಪಿ: ಜಿಲ್ಲೆಯಲ್ಲಿ ತುಳು ಭಾಷಾ ಅತಿಥಿ ಶಿಕ್ಷಕರಿಗೆ ಬಾಕಿ ಇರುವ ಗೌರವ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು. 6ರಿಂದ 10ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ ನಡುವೆ ಪಿಯುಸಿಯಲ್ಲಿ ತುಳು ಸಹಿತ ಕೊಡವ ಪಠ್ಯದ ಕೊರತೆಯನ್ನು ಎಸ್​ಇಪಿಯಲ್ಲಿ ಪರಿಗಣಿಸಲು ಅವಕಾಶವಿದೆ. ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ ನೀಡಲು ಪರಿಶೀಲಿಸಿ ತೀಮಾರ್ನಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್​ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾತೃಭಾಷೆ ಕನ್ನಡ ಅಥವಾ ಇಂಗ್ಲೀಷ್​ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಕೆಪಿಎಸ್​ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ರಾಜ್ಯದಲ್ಲಿ 6,000ಕ್ಕು ಅಧಿಕ ಗ್ರಾ.ಪಂ. ಗಳಿದ್ದು ತಲಾ 2ರಿಂದ 3ಗ್ರಾ.ಪಂ. ಗೊಂದು ಕರ್ನಾಟಕ ಪಬ್ಲಿಕ್​ ಸ್ಕೂಲ್​ ಮಾದರಿ ಶಾಲೆಗಳನ್ನು ಆರಂಭಿಸಲಾಗುವುದು. ಇದರ ಅಭಿವೃದ್ಧಿಗೆ ಸಿಎಸ್​?ಆರ್​ ನಿಧಿಯನ್ನು ಬಳಸಿಕೊಳ್ಳಲಾಗುವುದು ಎಂದರು.

ಅಧ್ಯಕ್ಷರ ನೇಮಕಕ್ಕೆ ಅಡಿ
ಪ್ರಧಾನಿ ಮೋದಿ ರಾಜ್ಯದ ಬಿಜೆಪಿ ನಾಯಕರನ್ನು ಫುಟ್​?ಪಾತ್​ನಲ್ಲಿ ನಿಲ್ಲಿಸಿದ್ದಾರೆ. ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವುದರಿಂದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ನೇಮಕಕ್ಕೆ ಅಡ್ಡಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ, ಅಶೋಕ್​ ಕುಮಾರ್​ ಕೊಡವೂರು, ದಿನೇಶ್​ ಹೆಗ್ಡೆ ಮೊಳಹಳ್ಳಿ, ಕೃಷ್ಣಮೂರ್ತಿ ಆಚಾರ್ಯ, ಕಿಶನ್​ ಹೆಗ್ಡೆ ಕೊಳ್ಕೆಬೈಲು, ಪ್ರಸಾದ್​ರಾಜ್​ ಕಾಂಚನ್​, ಮುನಿಯಾಲು ಉದಯ ಶೆಟ್ಟಿ, ಅಣ್ಣಯ್ಯ ಶೇರಿಗಾರ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net