

ಉಡುಪಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಣಿಪಾಲ ಸಂಗಮ ಕಲಾವಿದೆರ್ ಆಶ್ರಯದಲ್ಲಿ ಮಾ.19 ರಂದು ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ "ಕುರಲ್'- ತುಳು ಸಾಹಿತ್ಯ ಸಾಂಸತಿಕ ಪರ್ಬ ಆಯೋಜಿಸಲಾಗಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬೆಳಗ್ಗೆ 9.45ಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿಸಲಿದ್ದಾರೆ. ಬಳಿಕ ನವೋದಯ ಸಾಂಸತಿಕ ಕಲಾತಂಡ ಪಾಂಬೂರು ಇವರಿಂದ ಡೋಲು ಪ್ರಾತ್ಯಕ್ಷಿಕೆ ನಡೆಯಲಿದೆ. ಸಾಯಂಕಾಲ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಲೇಖಕ ಪ್ರೊ. ಮುರಳೀಧರ ಉಪಾಧ್ಯಾಯ ಮತ್ತು ಉದ್ಯಮಿ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಗಮ ಕಲಾವಿದೆರ್ ಸಂಸ್ಥೆಯ ಶ್ರೇಯಸ್ ಕೋಟ್ಯಾನ್, ರಾಘವೇಂದ್ರ ನಾಯ್ಕ್, ಆನಂದ್ ನಾಯ್ಕ್, ವೈಷ್ಣವಿ ಭಂಡಾರ್ಕರ್ ಉಪಸ್ಥಿತರಿದ್ದರು.