

ಮಂಗಳೂರು ; ಗ್ಲೋಬಲ್ ಮೀಡಿಯಾದ 2025ರ ತುಳುನಾಡು ಪಂಚಾಂಗ ಕ್ಯಾಲೆಂಡರನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.
ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು. ಎಸ್‌ಡಿಎಂ ಸೊಸೈಟಿಯ ಕಾರ್ಯದರ್ಶಿ ಜೀವಂಧರ ಕುಮಾರ, ಉದ್ಯಮಿ ಸತೀಶ ಡಿ. ಶೆಟ್ಟಿ, ಗ್ಲೋಬಲ್ ಮೀಡಿಯಾದ ಸತೀಶ ರಾವ್ ಮತ್ತು ದಿನೇಶ ಶೆಟ್ಟಿ ಉಪಸ್ಥಿತರಿದ್ದರು.
ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವಾಗಿದ್ದು ಅನೇಕ ಇತಿಹಾಸ ಪ್ರಸಿದ್ಧ ಶ್ರದ್ಧಾ ಕೇಂದ್ರಗಳಿವೆ . 2025ರ ಕ್ಯಾಲೆಂಡರ್ ಗಣಪತಿ ದೇವಸ್ಥಾನಗಳಾದ
ಶರವು ಮಹಾಗಣಪತಿ ದೇವಸ್ಥಾನ ಮಂಗಳೂರು, ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ, ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿ , ಪಿಲಾರುಖಾನ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಗಣೇಶಪುರ ಮಹಾಗಣಪತಿ ದೇವಸ್ಥಾನ ಗಣೇಶಪುರ-ಕಾಟಿಪಳ್ಳ, ಸೌತಡ್ಕ ಮಹಾಗಣಪತಿ ದೇವಸ್ಥಾನ , ಪೆರ್ಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಉಡುಪಿ, , ಮಹಾಗಣಪತಿ ದೇವಸ್ಥಾನ ಸೋಮೇಶ್ವರ ಉಡುಪಿ, ಮಹತೋಭಾರ ಸಿದ್ಧಿವಿನಾಯಕ ದೇವಸ್ಥಾನ ಉದ್ಯಾವರ, ಉಡುಪಿ, ಆನೆಗುಡ್ಡೆ ವಿನಾಯಕ ದೇವಸ್ಥಾನ ಕುಂಭಾಶಿ, ಉಡುಪಿ, ಮಹತೋಭಾರ ಸಿದ್ಧಿವಿನಾಯಕ ದೇವಸ್ಥಾನ ಉಪ್ಪೂರು, ಮಹಾಗಣಪತಿ ದೇವಸ್ಥಾನ ಆಳದಂಗಡಿ ಇವುಗಳ ಮೂಲ ವಿಗ್ರಹದ ಅಲಂಕಾರವುಳ್ಳ ನೈಜ ಚಿತ್ರಣವನ್ನು ಹೊಂದಿದೆ. ಈ ವಿಶೇಷ ಕ್ಯಾಲೆಂಡರ್‌ಗಳಿಗೆ ರಾಜ್ಯ
ಹಾಗೂ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಪ್ರಕಟಣೆ ತಿಳಿಸಿದೆ.