

ಉಪ್ಪಳ: ನಂದಿಕೇಶ್ವರ ನಾಟಕ ಸಂಘ ಮಂಗಳೂರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮದಲ್ಲಿ, ತುಳುರಂಗಭೂಮಿ ಕಲಾವಿದ ಸೋಮನಾಥ ಶೆಟ್ಟಿ ಮಂಗಲ್ಪಾಡಿ ಅವರಿಗೆ ‘ತುಳುನಾಡ ಕಲಾ ಸಿಂಧೂರ’ ಬಿರುದು ನೀಡಿ ಸನ್ಮಾನಿಸಲಾಯಿತು.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ, ನಿರ್ದೇಶಕ, ನಿರ್ಮಾಪಕ ಅಸ್ಕರ್ ಕೃಷ್ಣ, ನಟ ನಿರ್ಮಾಪಕ ನಂದನ್ ಮೊದಲಾದವರು ಉಪಸ್ಥಿತರಿದ್ದರು.