ತುಳುನಾಡ ಸಂತೆ ಆಯೋಜನೆ ಶ್ಲಾಘನಾರ್ಹ : ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಮೆಚ್ಚುಗೆ

New Project (22)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಕೃಷಿ ಉತ್ಪನ್ನಗಳನ್ನು ಬೆಳೆಸುವ ರೈತನಿಗೆ ಮಧ್ಯವರ್ತಿಗಳ ತೊಂದರೆಯಿಲ್ಲದೆ ವ್ಯಾಪಾರ ಮಾಡುವ ಜಾಗ ಸಂತೆ. ಅಂತಹ ತುಳನಾಡ ಸಂತೆಯನ್ನು ಆಯೋಜಿಸಿ ಮಾವು, ಹಲಸಿನ ಹಣ್ಣಿನ ಜತೆಗೆ ಸಾಹಿತ್ಯ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ ಬಂಟ್ವಾಳ ತುಳುಕೂಟದ ಕಾರ್ಯ ಶ್ಲಾಘನೀಯ ಎಂದು ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಹೇಳಿದರು.

ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ತುಳುವೆರೆನ ತುಳುನಾಡ ಸಂತೆ ಕುಕ್ಕು ಪೆಲಕಾಯಿದ ಒಟ್ಟುಗು ತುಳು ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಳುನಾಡ ಸಂತೆ ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್ ಅಧ್ಯಕ್ಷತೆ ವಹಿಸಿದ್ದರು. ತುಳು ಲಿಪಿಯಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಗೌರವಿಸಲಾಯಿತು. ಅಖಿಲ ಭಾರತ ತುಳುಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿ ಪಿಯೂಸ್ ಎಲ್.ರೋಡ್ರಿಗಸ್, ವಕೀಲ ಅಶ್ವನಿ ಕುಮಾರ್ ರೈ, ಉದ್ಯಮಿ ಸತೀಶ್ ಭಂಡಾರಿ ಕುಳತ್ತಬೆಟ್ಟು, ತುಳೆವರ ಕಲ ಅಧ್ಯಕ್ಷೆ ಗೀತಾ ಲಕ್ಷ್ಮೀಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಜಯಾನಂದ ಉಪಸ್ಥಿತರಿದ್ದರು. ತುಳುಕೂಟ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್ ಸ್ವಾಗತಿಸಿದರು. ಸ್ವಾಗತ ಸಮಿತಿ ಸಂಚಾಲಕ ಸುಕುಮಾರ್ ಬಂಟ್ವಾಳ ವಂದಿಸಿದರು. ಕಾರ್ಯದರ್ಶಿ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

ತುಳು ಭಾಷೆ ಎಲ್ಲರನ್ನು ಪ್ರೀತಿಸುವ ಭಾಷೆ. ತುಳು ಭಾಷೆಗೆ ಮಡಿವಂತಿಕೆ ಇಲ್ಲ. ತುಳುವೆ ಹಲಸಿನಂತೆ ತುಳು ಭಾಷೆ ಮಾತನಾಡುವ ಜನ ಮೃದು ಸ್ವಭಾವದವರು. ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಅನೇಕ ಹೋರಾಟಗಳು ನಡೆದಿವೆ. ಇದಕ್ಕೊಂದು ತಾತ್ವಿಕ ಅಂತ್ಯ ಸಿಗಬೇಕಾಗಿದೆ. ಬಿ.ರಮಾನಾಥ ರೈ, ಮಾಜಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net